ಉಡುಪಿದಕ್ಷಿಣ ಕನ್ನಡ

ಉಡುಪಿಯಲ್ಲಿ ಲವ್ ಜಿಹಾದ್? ಇಸ್ಲಾಂಗೆ ಕನ್ವರ್ಟ್ ಆಗುವಂತೆ ವಿದ್ಯಾರ್ಥಿನಿಗೆ ಕಿರುಕುಳ ಆರೋಪ : ವೈದ್ಯ ಅರೆಸ್ಟ್!

ಉಡುಪಿ : ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನೊಬ್ಬ ವೈದ್ಯಕೀಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪ ಉಡುಪಿಯಲ್ಲಿ ಕೇಳಿ ಬಂದಿದೆ.

ಉಡುಪಿಯ ಮಣಿಪಾಲದಲ್ಲಿ ಈ ಘಟನೆ ನಡೆದಿದ್ದು, ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪದ ಮೇಲೆ ಸಹಪಾಠಿ ವೈದ್ಯಕೀಯ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ. ಮಣಿಪಾಲದ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದ್ದು, ಸದ್ಯ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಡ್ಯಾನಿಷ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾಭ್ಯಾಸ ಮಾಡಲು ಹೊರ ರಾಜ್ಯದಿಂದ ವೈದ್ಯಕೀಯ ವಿದ್ಯಾರ್ಥಿಗಳು ಉಡುಪಿಯ ಮಣಿಪಾಲಕ್ಕೆ ಬಂದಿದ್ದಾರೆ. ದೆಹಲಿ ಮತ್ತು ರಾಜಸ್ಥಾನದಿಂದ ಬಂದಿರುವ ಈ ವಿದ್ಯಾರ್ಥಿಗಳು ಪರಸ್ಪರ ಪ್ರೀತಿಯಲ್ಲಿ ಬಿದ್ದಿದ್ದು, ಪ್ರೀತಿಯಲ್ಲಿದ್ದಾಗ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ಪ್ರೇಯಸಿಯ ಮುಂದೆ ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದಾನೆ. ಆದರೆ ನಿನ್ನನ್ನು ಮದುವೆಯಾಗಬೇಕೆಂದರೆ ಇಸ್ಲಾಂಗೆ ಮತಾಂತರವಾಗಬೇಕೆಂದು ಷರತ್ತು ಹಾಕಿದ್ದಾನೆ ಎಂದು ಹೇಳಲಾಗಿದೆ.

ಮಹಮ್ಮದ್ ಡ್ಯಾನಿಷ್ ಖಾನ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಕ್ಯಾಂಪಸ್‌ನಲ್ಲಿ ಪರಿಚಯವಾಗಿದೆ, ನಂತರ ಆತ ಸಂತ್ರಸ್ತೆಯ ಫೋನ್ ನಂಬರ್ ಪಡೆದುಕೊಂಡು ಗೆಳೆತನ ಬೆಳೆಸಿದ್ದಾನೆ. ಆಮೇಲೆ 2024 ರ ಜನವರಿ 22ರಂದು ಮಾತುಕತೆ ವೇಳೆ ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆಯೂ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಮಾರ್ಚ್ 11 ರಂದು ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ತನ್ನ ಪ್ರೇಯಸಿಯ ರೂಮ್ಗೆ ಹೋಗಿದ್ದಾನೆ. ಈ ವೇಳೆ ಪ್ರೇಯಸಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿದ್ದಾನೆ. ಆಗ, ಪ್ರೇಯಸಿ ನಿರಾಕರಿಸಿದಾಗ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ಆಕೆಯ ಕೆನ್ನೆಗೆ ಹೊಡೆದು, ಕೂದಲು ಹಿಡಿದು ಎಳೆದಿದ್ದಾನೆ. ಅಲ್ಲದೇ, ದೇಹದ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕತೆಗೆ ಬೇಡಿಕೆ ಇಟ್ಟಿದ್ದಾನೆ. ನಿರಂತರವಾಗಿ, ಪೋನ್‌ನಲ್ಲಿ ಕಿರುಕುಳ ಕೊಡಲು ಆರಂಭಿಸಿದ್ದಾನೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ದಾಖಲಿಸಿದ್ದಾಳೆ.

ಈತನ ಕಿರುಕುಳದಿಂದ ರೋಸಿ ಹೋದ ವಿದ್ಯಾರ್ಥಿನಿ ಆಗಸ್ಟ್ 31 ರಂದು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಕೂಡಲೆ ಪೊಲೀಸರು ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್ಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಶಾಸಕರೇ ಪುಂಡಾಟಿಕೆ ನಿಲ್ಲಿಸಿ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಿ -ರಮೇಶ್ ಕಾಂಚನ್

Udupilive News

ಶ್ರೀ ಕೃಷ್ಣ ಮಠಕ್ಕೆ ಅಗಮಿಸಿದ ಯೋಗಗುರು ಬಾಬಾರಾಮ್ ದೇವ್ ಜೀಗೆ ಪೂರ್ಣಕುಂಭ ಸ್ವಾಗತ

Udupilive News

ಇತಿಹಾಸ ಪ್ರಸಿದ್ಧ ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಡಿ.9ರಿಂದ 15ರ ವರೆಗೆ ಶತಚಂಡಿಕಾ ಯಾಗ ಮತ್ತು ಬ್ರಹ್ಮಮಂಡಲ ಸೇವೆ .

Udupilive News

Leave a Comment