ಕಾಪು

ಡಿ. ದೇವರಾಜ್ ಅರಸು ಅಭಿವೃದ್ಧಿ ನಿಗಮದಡಿ 31 ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

ಡಿ. ದೇವರಾಜ್ ಅರಸು ಅಭಿವೃದ್ಧಿ ನಿಗಮದಡಿ 31 ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಉಡುಪಿ ಜಿಲ್ಲೆ ವತಿಯಿಂದ ಮಂಜೂರಾದ ಉಚಿತ ಹೋಲಿಗೆ ಯಂತ್ರವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ದಿನಾಂಕ 04-09-2024 ರಂದು ಕಾಪು ಪುರಸಭೆಯ ಸಭಾಂಗಣದಲ್ಲಿ ವಿತರಿಸಿದರು.

ಕಾಪು ತಾಲೂಕು ವ್ಯಾಪ್ತಿಯ 31 ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ತಾಲೂಕು ಆಡಳಿತಾಧಿಕಾರಿಗಳಾದ ಪೂರ್ಣಿಮಾ, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ವ್ಯವಸ್ಥಾಪಕರಾದ ಮಂಜುನಾಥ್ ಉಪಸ್ಥಿತರಿದ್ದರು.

Related posts

ದೊಡ್ಡಣಗುಡ್ಡೆಯ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ದುರಂತ.

Udupilive News

ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರಾಗಿ ಸುಧರ್ಶನ್ ಪೂಜಾರಿ

Udupilive News

ಉಡುಪಿ: ಬೈಕ್ ಗೆ ಕಾರು ಡಿಕ್ಕಿ; ಕಾಲೇಜು ವಿದ್ಯಾರ್ಥಿ ಮೃತ್ಯು

Udupilive News

Leave a Comment