ಅಂತಾರಾಷ್ಟ್ರೀಯರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು 3991 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಯಾವೆಲ್ಲ ಅಂಶಗಳು ಇರಲಿವೆ ಎನ್ನುವ ಕುರಿತು ಕುತೂಹಲ ಮೂಡಿದೆ. ದರ್ಶನ್ ಅವರು ಎ2 ಆರೋಪಿ ಆಗಿ ಮುಂದುವರಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು ಸುಮಾರು ನಾಲ್ಕು ಸಾವಿರ ಪುಟಗಳ ಚಾರ್ಜ್​ಶೀಟ್​​ ಸಲ್ಲಿಕೆ ಮಾಡಿದ್ದಾರೆ. ಇಂದು (ಸೆಪ್ಟೆಂಬರ್ 4) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಒಂದು ಪ್ರಮುಖ ಬೆಳವಣಿಗೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹಾಗಾಗಿಲ್ಲ. ಇದು ದರ್ಶನ್ ಫ್ಯಾನ್ಸ್​ಗೆ ಕೊಂಚ ರಿಲೀಫ್ ನೀಡಿದೆ.

ಈ ಮೊದಲು ಎಫ್​ಐಆರ್​ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರು. ಇದನ್ನು ಚಾರ್ಜ್​ಶೀಟ್​ನಲ್ಲಿ ಬದಲಿಸಬಹುದು ಎಂದು ಊಹಿಸಲಾಗಿತ್ತು. ದರ್ಶನ್ ಎ1 ಹಗೂ ಪವಿತ್ರಾ ಎ2 ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಎಸಿಪಿ ಚಂದನ್​​ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ. ಇದರಿಂದ ಪವಿತ್ರಾ ಅವರು ಎ1 ಆರೋಪಿ ಆಗಿ ಮುಂದುವರಿದಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಭಾಗಿಯಾದ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. 3 ಪ್ರತ್ಯಕ್ಷ ಸಾಕ್ಷಿಗಳು ಇವೆ. ಎಫ್​ಎಸ್​ಎಲ್​ ಮಾತ್ತು ಸಿಎಫ್​ಎಸ್​ಎಲ್​ನಿಂದ 8 ವರದಿಗಳು ಇವೆ. ಈ ಪ್ರಕರಣದಲ್ಲಿ ಒಟ್ಟೂ 231 ಸಾಕ್ಷಿಗಳು ಇವೆ. ಕೊಲೆ ಕೇಸ್​ನಲ್ಲಿ ಇನ್ನೂ ತನಿಖೆ ಪೂರ್ಣಗೊಂಡಿಲ್ಲ. ಹೀಗಾಗಿ ಸಿಆರ್​ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ವಿಶೇಷ ಕೋರ್ಟ್​ಗೆ ಪೊಲೀಸರು ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.

ಕಿಡ್ನಾಪ್ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ನಂತ್ರ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ಅವರ ರಕ್ತ ಇರುವುದು ಪತ್ತೆ ಆಗಿದೆ. ಇದರಿಂದ ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ ಬಗ್ಗೆ ಖಚಿತ ಮಾಹಿತಿ ಸಿಕ್ಕಂತೆ ಆಗಿದೆ.

ಕೊಲೆ ಮಾಡಲು ಮೂಲ ಕಾರಣ ಪವಿತ್ರಾ ಗೌಡ. ಹೀಗಾಗಿ, ಅವರು ಎ1 ಆಗಿದ್ದಾರೆ. ಹಲ್ಲೆ ನಡೆಯುವ ಸ್ಥಳದಲ್ಲಿ ಅವರು ಹಾಜರಿದ್ದರು. ಚಪ್ಪಲಿಯಲ್ಲಿ ಅವರು ಹೊಡೆದಿದ್ದಾರೆ. ಕೃತ್ಯ ನಡೆದ ಸಮಯದಲ್ಲಿ ಪವಿತ್ರ ಗೌಡ ಅಲ್ಲೇ ಇರುವುದಕ್ಕೆ ಸಾಕ್ಷಿ ಸಿಕ್ಕಿದೆ. ಪವಿತ್ರ ಗೌಡ ಮೊಬೈಲ್ ಕೃತ್ಯದ ಸ್ಥಳದಲ್ಲಿ ಆಕ್ಟೀವ್ ಆಗಿತ್ತು.

Related posts

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಎ1 ಆರೋಪಿ ಆಯಿಷಾ ಬಂಧನ

Udupilive News

ಮುಳ್ಳುಗುಡ್ಡೆ ಕೊರಗಜ್ಜನ ನೇಮೋತ್ಸವದಲ್ಲಿ ಭಾಗಿಯಾದ ನಟೊ ರಚಿತಾರಾಮ್

Udupilive News

6 ಜನರ ಮೇಲೆ ಎಫ್‌ಐಆರ್ ದಾಖಲು – ಹನಿಟ್ರ್ಯಾಪ್‌ಗೆ ಮುಮ್ತಾಜ್ ಅಲಿ ಬಲಿ?

Udupilive News

Leave a Comment