ಕಾರ್ಕಳ

ಕಾರ್ಕಳ: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಬ್ಯಾನರ್ – ಇಬ್ಬರ ಬಂಧನ

ಕಾರ್ಕಳ: ಇಲ್ಲಿನ ಕಮಲಾಕ್ಷ ನಗರ ಎಂಬಲ್ಲಿ ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಸೆ.3ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬ್ಯಾನರ್‌ನಲ್ಲಿ ಹೆಸರು ಉಲ್ಲೇಖಿಸಿದ್ದ ಸ್ಥಳೀಯ ನಿವಾಸಿ ಸತೀಶ್ ದೇವಾಡಿಗ ಹಾಗೂ ಬ್ಯಾನರ್ ಮುದ್ರಿಸಿದ ಕಾರ್ಕಳ ಮಾರ್ಕೆಟ್ ರಸ್ತೆಯಲ್ಲಿರುವ ಅಮೂಲ್ಯ ಗ್ರಾಫಿಕ್ಸ್‌ನ ಮಾಲಕಿ ಪುಷ್ಪಲತಾ ಎಂದು ಗುರುತಿಸಲಾಗಿದೆ.

ಮುಸ್ಲಿಮರ ಬಗ್ಗೆ ಅವಹೇಳನಕಾರಿ ಬರಹಗಳೊಂದಿಗೆ ಹಾಕಲಾದ ಬ್ಯಾನರ್ ಸೆ.2ರಂದು ಪ್ರತ್ಯಕ್ಷವಾಗಿದ್ದು, ಇದರಲ್ಲಿ ಸತೀಶ್ ದೇವಾಡಿಗ ತನ್ನ ಹೆಸರು ಹಾಗೂ ತಾನು ಸ್ವಾತಂತ್ರ್ಯ ಹೋರಾಟಗಾರ ಎಂಬುದಾಗಿ ಬರೆದುಕೊಂಡಿದ್ದನು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಸತೀಶ್ ದೇವಾಡಿಗ ಹಾಗೂ ಪುಷ್ಪಲತಾರನ್ನು ಬಂಧಿಸಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇವರ ಪೈಕಿ ಸತೀಶ್ ದೇವಾಡಿಗನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ್ದು, ಪುಷ್ಪಲತಾಳನ್ನು ಷರತ್ತು ಬದ್ಧ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Related posts

ಇತಿಹಾಸ ಪ್ರಸಿದ್ಧ ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಡಿ.9ರಿಂದ 15ರ ವರೆಗೆ ಶತಚಂಡಿಕಾ ಯಾಗ ಮತ್ತು ಬ್ರಹ್ಮಮಂಡಲ ಸೇವೆ .

Udupilive News

ಮಾಹೆ 19 ನೇ  ಎಫ್ ಐ ಸಿ ಸಿ ಐ  ಉನ್ನತ ಶಿಕ್ಷಣ ಪ್ರಶಸ್ತಿ 2024 ರ “ವರ್ಷದ ಅತ್ಯುತ್ತಮ ವಿಶ್ವವಿದ್ಯಾಲಯ” (ಸ್ಥಾಪಿತ ವರ್ಗ)   ಪ್ರಶಸ್ತಿಪಡೆದಿದೆ

Udupilive News

ಉಡುಪಿ: ಬೈಕ್ ಗೆ ಕಾರು ಡಿಕ್ಕಿ; ಕಾಲೇಜು ವಿದ್ಯಾರ್ಥಿ ಮೃತ್ಯು

Udupilive News

Leave a Comment