ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ದೊಡ್ಡಣಗುಡ್ಡೆಯ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ದುರಂತ.

ಹೊರಗೆ ಓಡಿಬಂದು ಅಪಾಯದಿಂದ ಪಾರಾದ ಕಾರ್ಮಿಕರು

ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಸಿಬ್ಬಂದಿ ಹಾಗೂ ಇಬ್ಬರು ಕಾರ್ಮಿಕರು ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ. ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ.‌ ಇದರಿಂದ ಭಾರೀ ದುರಂತ ತಪ್ಪಿದಂತಾಗಿದೆ.

ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಉಡುಪಿ ಅಗ್ನಿಶಾಮಕ ಇಲಾಖೆಯ ತಂಡ ಎರಡು ಫೈರ್ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದೆ.

Related posts

ಶಿರ್ವ: ಅತ್ಯಾಚಾರಕ್ಕೊಳಗಾದ ಯುವತಿಯ ಮಗು ಮಾರಾಟ.ಡಾಕ್ಟರ್ ಸೇರಿ ಮೂವರು ಅರೆಸ್ಟ್

Udupilive News

ವೆಲ್ಫೇರ್ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಇದ್ರಿಸ್ ಹೂಡೆ ಅಯ್ಕೆ

Udupilive News

ಶತಮಾನ ಕಂಡ ಶಾಲೆಗೆ ರಮಣಶ್ರೀ ಗ್ರೂಪ್‌ನಿಂದ ಸಹಾಯದ ಭರವಸೆ

Udupilive News

Leave a Comment