ಉಡುಪಿಕಾರ್ಕಳಹೆಬ್ರಿ

ಉಡುಪಿಯಲ್ಲಿ ಮೇಘಸ್ಪೋಟ – ನಾಪತ್ತೆಯಾದ ವೃದ್ಧೆ ಶವವಾಗಿ ಪತ್ತೆ

ಉಡುಪಿ: ಹೆಬ್ರಿ (Hebri) ತಾಲೂಕಿನ ಮುದ್ರಾಡಿಯಲ್ಲಿ ಭಾನುವಾರ ಸಂಭವಿಸಿದ ಮೇಘಸ್ಪೋಟದಲ್ಲಿ (Cloudburst) ನಾಪತ್ತೆಯಾದ ವೃದ್ಧೆ ದೇಹ ಶವವಾಗಿ ಪತ್ತೆಯಾಗಿದೆ.

ಮೇಘಸ್ಪೋಟದ ಮಾದರಿಯಲ್ಲಿ ಏಕಾಏಕಿ ಮಳೆ ಸುರಿದಿದ್ದರಿಂದ ಚಂದ್ರ ಗೌಡ್ತಿ (85) ನೆರೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಇಂದು ಬಲ್ಲಾಡಿ (Balladi) ಪರಿಸರದ ಗದ್ದೆ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಲಾಡಿ ವ್ಯಾಪ್ತಿಯ ಪಶ್ಚಿಮ ಘಟ್ಟದ ಕೆಳಗಿನ ಕಬ್ಬಿನಾಲೆಯ ಹಳ್ಳದಲ್ಲಿ ಭಾನುವಾರ ಸಂಜೆ ದಿಢೀರ್ ನೀರಿನ ಹರಿವು ಉಂಟಾಗಿದ್ದು, 10ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.

ಘಟನೆಯಲ್ಲಿ ಎರಡು ಕಾರು ಹಾಗೂ ಎರಡು ಬೈಕ್‌ಗಳು ಕೊಚ್ಚಿ ಹೋಗಿವೆ. ಪ್ರವಾಹದಿಂದ ಸುಮಾರು 150 ಎಕರೆ ಪ್ರದೇಶದಲ್ಲಿ ಬೆಳೆದ ಭತ್ತ, ರಬ್ಬರ್, ಅಡಿಕೆ, ತೆಂಗು, ಬಾಳೆ ಬೆಳೆ ಹಾನಿಯಾಗಿದೆ. ಭಾನುವಾರ ಮಧ್ಯಾಹ್ನ 2:30ರ ಸುಮಾರಿಗೆ ಧಾರಾಕಾರ ಮಳೆ ಸುರಿದಿದ್ದು, ಬಳಿಕ ನದಿಯಲ್ಲಿ ಪೂರ್ಣ ಪ್ರಮಾಣದಲ್ಲಿ ನೀರು ಹರಿಯಲಾರಂಭಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

 

Related posts

ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆ ಸಾವು

Udupilive News

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

Udupilive News

ಅ.25ರಂದು ಉಡುಪಿಯಲ್ಲಿ “ಕೆನರಾ ರಿಟೈಲ್ ಮೇಳ-2024

Udupilive News

Leave a Comment