ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ- ದೇವಸ್ಥಾನದ ಅರ್ಚಕ ಬಂಧನ ,20 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಗಂಗೊಳ್ಳಿ : ಇಲ್ಲಿನ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ.

ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿ, ನಕಲಿ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ಇರಿಸಿದ್ದ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಯು ದೇವಸ್ಥಾನದ ಚಿನ್ನಾಭರಣಗಳನ್ನು ವಿವಿಧ ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಅಡಮಾನವಿರಿಸಿರುವುದಾಗಿ ತಿಳಿಸಿದ್ದಾನೆ. ಆರೋಪಿಯಿಂದ 40 ಗ್ರಾಂ ತೂಕದ ಚಿನ್ನದ ಜೋಬಿನ ಸರ ,73 ಗ್ರಾಂ ತೂಕದ ಚಿನ್ನದ ಕಾಸಿ ತಾಳಿ ಸರ , 73 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 6 ಗ್ರಾಂ ತೂಕದ 3 ಚಿನ್ನದ ತಾಳಿ, 64 ಗ್ರಾಂ ತೂಕದ ಚಿನ್ನದ ನಕ್ಲೇಸ್ ಸರ ಹೀಗೆ ಒಟ್ಟು 20,48,000 ರೂ. ಮೌಲ್ಯದ 256 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯನ್ನು ಸದ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Related posts

ಧರ್ಮಸ್ಥಳ ಕ್ಷೇತ್ರದ ಗೌರವ ಹಾಗು ಘನತೆಯನ್ನು ಕುಗ್ಗಿಸಲೆತ್ನಿಸುತ್ತಿರುವುದು ಅಕ್ಷಮ್ಯ ಅಪರಾಧ – ವಿಶ್ವ ಹಿಂದೂ ಪರಿಷದ್

Udupilive News

ಉಡುಪಿ ಪತ್ರಕರ್ತರ ಸಂಘದಿಂದ ಸ್ವಾತಂತ್ರೋತ್ಸವ ದಿನಾಚರಣೆ

Udupilive News

ಎಡನೀರು ಮಠಾಧೀಶರಿಂದ ಶ್ರೀಕೃಷ್ಣ ದರ್ಶನ

Udupilive News

Leave a Comment