ಉಡುಪಿಕಾಪುಕಾರ್ಕಳ

ಗಣೇಶ್ ಪ್ರಸಾದ್ ಜಿ. ನಾಯಕ್ ಅವರಿಗೆ ಪಿ.ಎಚ್.ಡಿ

ಉಡುಪಿ:ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾರಕೂರು ಇಲ್ಲಿಯ ಸಮಾಜಕಾರ್ಯ ಉಪನ್ಯಾಸಕ ಗಣೇಶ್ ಪ್ರಸಾದ್ ಜಿ. ನಾಯಕ್ ಅವರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿಯ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ದುಗ್ಗಪ್ಪ ಕಜೆಕಾರ್ ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿದ ‘ಗ್ರಾಮೀಣಾಭಿವೃದ್ಧಿಯಲ್ಲಿ ಯುವಕ ಮಂಡಲಗಳ ಪಾತ್ರ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಅನುಲಕ್ಷಿಸಿ)’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿದೆ.

ಗಣೇಶ್ ಪ್ರಸಾದ್ ಜಿ. ನಾಯಕ್ ಅವರು ಈ ಹಿಂದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಮತ್ತು ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಕಾರ್ಯ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಏಶಿಯಾ ಪೆಸಿಫಿಕ್ ಅಂತರಾಷ್ಟ್ರೀಯ ವಿಚಾರ ಸಂಕಿರಣ, ಗುಜರಾತ್ ಕಾನೂನು ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಹಲವು ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗ್ರಾಮ ಪಂಚಾಯತ್ ಮಹಿಳಾ ಪ್ರತಿನಿಧಿಗಳಿಗೆ ನಡೆಸಿದ ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದಾರೆ. ಇವರು ಜಿ. ಗೋಕುಲದಾಸ್ ನಾಯಕ್ ಮತ್ತು ಮಧುವಂತಿ ಜಿ. ನಾಯಕ್ ದಂಪತಿಗಳ ಪುತ್ರ.

Related posts

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ; ಗೋಡೆಗಳು ಛಿದ್ರ ಛಿದ್ರ

Udupilive News

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಪುಷ್ಪ ನಮನ

Udupilive News

ಉಡುಪಿ – ಅಂಗಾರಕಟ್ಟೆ ನಡುವೆ ಸಂಚರಿಸಲು ಸರಕಾರಿ ಬಸ್ ವ್ಯವಸ್ಥೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

Udupilive News

Leave a Comment