ಉಡುಪಿ: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ರಚಿತಾ ರಾಮ್ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕ ಸಮೀಪ ಇರುವ ಮುಳ್ಳಗುಡ್ಡೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.ಕ್ಷೇತ್ರದಲ್ಲಿ ನಡೆದ ಕೊರಗಜ್ಜನ ನೇಮೋತ್ಸವದಲ್ಕಿ ಭಾಗಯಾಗದರು. ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನ ಸಂತರ್ಪಣೆಯಲ್ಲಿ ಭಾಗಿಯಾಗಿದ್ದಾರೆ. ಸದ್ಯ ಚಲನಚಿತ್ರ ಒಂದರ ಶೂಟಿಂಗ್ ನಲ್ಲಿ ಉಡುಪಿ ಮತ್ತು ಕರಾವಳಿ ಭಾಗದಲ್ಲಿ ಬೀಡುಬಿಟ್ಟಿರುವ ನಟಿ, ಮುಳ್ಳಗುಡ್ಡೆ ಕ್ಷೇತ್ರದ ಬಗ್ಗೆ ಮಾಹಿತಿ ಪಡೆದು ಅಲ್ಲಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕ್ಷೇತ್ರಕ್ಕೆ ತೆರಳಿದ ತಮ್ಮ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
previous post