ಉಡುಪಿರಾಜ್ಯ

ಇಂದು ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಅ.9ರಂದು ಬುಧವಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಅದೇ ರೀತಿ ಅ.10ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನು ಅ.11ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಅ.12 ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅ.14ರವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ.

Related posts

ಮಲ್ಪೆ: ಮಹಾಲಕ್ಷ್ಮಿ ಬ್ಯಾಂಕ್ ಅವ್ಯವಹಾರ ಆರೋಪ, ಮಲ್ಪೆ ಠಾಣೆಯೆದುರು ಸಂತ್ರಸ್ತರ ಮೌನ ಪ್ರತಿಭಟನೆ

Udupilive News

ಕಾರ್ಕಳ: ಸ್ನೇಹಿತರ ಜೊತೆ ಆಡುತ್ತಿದ್ದಾಗ ಶಾಂಭವಿ ಹೊಳೆಗೆ ಬಿದ್ದು ಬಾಲಕ ಮೃತ್ಯು

Udupilive News

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ 2026 ಜನವರಿಯಲ್ಲಿ ತೆರೆಗೆ….

Udupilive News

Leave a Comment