ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆ ಸಾವು

ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ.

ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ ಹಳಿ ದಾಟುವಾಗ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ಸಿಬಂದಿ ಚಿರತೆಯ ಕಳೇಬರ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಚಿರತೆಯ ಕಳೇಬರವನ್ನು ದಹನ ಮಾಡಲಾಯಿತು.

Related posts

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Udupilive News

ರೈಲು ಮಾರ್ಗ ಕುಸಿತ ಹಿನ್ನಲೆ ರೈಲು ಸಂಚಾರದಲ್ಲಿ ಬದಲಾವಣೆ.

Udupilive News

ನ.4ರಿಂದ 10ರವರೆಗೆ ಚಿಕ್ಕಮಗಳೂರಿನ ದತ್ತ ಪೀಠದಲ್ಲಿ ದತ್ತಮಾಲಾ ಅಭಿಯಾನ; ಉಡುಪಿಯಿಂದ 500ಕ್ಕಿಂತಲೂ ಹೆಚ್ಚು ಕಾರ್ಯಕರ್ತರು ಭಾಗಿ

Udupilive News

Leave a Comment