ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಬೈಂದೂರುಬ್ರಹ್ಮಾವರಮಂಗಳೂರುಮೂಲ್ಕಿ-ಮೂಡುಬಿದ್ರಿಹೆಬ್ರಿ

ಅಪ್ರೆಂಟಿಸ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

ಉಡುಪಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋಧ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಉಡುಪಿ ಜಿಲ್ಲಾ ಕಚೇರಿಗೆ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ.ಗಳ ಸ್ಟೈಪಂಡ್ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದAದು 35 ವರ್ಷದೊಳಗಿರಬೇಕು.

ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ನಾಯರ್‌ಕೆರೆ, ಬ್ರಹ್ಮಗಿರಿ, ಉಡುಪಿ ಕಚೇರಿಯನ್ನು ಸಂಪರ್ಕಿಸುವAತೆ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್  ಮಾಡಿದವಳು ,ಬಾಯ್ ಫ್ರೆಂಡ್ ಜೊತೆ ಸೇರಿ  ಕೊಂದೇ ಬಿಟ್ಟಳು.

Udupilive News

ಶತಮಾನ ಕಂಡ ಶಾಲೆಗೆ ರಮಣಶ್ರೀ ಗ್ರೂಪ್‌ನಿಂದ ಸಹಾಯದ ಭರವಸೆ

Udupilive News

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಅಗತ್ಯ ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ

Udupilive News

Leave a Comment