ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿ

ಮುಲ್ಕಿ: ಮನೆಯ ಅಡುಗೆ ಕೋಣೆಗೆ ನುಗ್ಗಿದ ಚಿರತೆ – ಬೆಚ್ಚಿಬಿದ್ದ ಮನೆಮಂದಿ.!

ಮಂಗಳೂರು: ಮನೆಯ ಅಡುಗೆ ಕೋಣೆಗೆ ಚಿರತೆಯೊಂದು ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಮುಲ್ಕಿಯ ಅಕ್ಕಸಾಲಿಗರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಗೆ ಸುಮಾರು ಒಂದು ವರ್ಷ ಪ್ರಾಯದ ಚಿರತೆ ನುಗ್ಗಿದೆ.
ಈ ವೇಳೆ ನಾಯಿ ಬೊಗಳಲು ಆರಂಭಿಸಿದ್ದು, ಮನೆಮಂದಿ ಚಿರತೆ ನೋಡಿ ಬೆಚ್ಚಿಬಿದ್ದಿದ್ದಾರೆ.

ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಅಡುಗೆ ಮನೆಯ ಮುಂಭಾಗ ಬಾಗಿಲಿಗೆ ಬೋನ್ ಅಳವಡಿಸಿ ಸುಮಾರು 5 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಬೋನಿನೊಳಗೆ ಬಿದ್ದಿದೆ.

Related posts

ಅಪ್ರೆಂಟಿಸ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

Udupilive News

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಎ1 ಆರೋಪಿ ಆಯಿಷಾ ಬಂಧನ

Udupilive News

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

Udupilive News

Leave a Comment