ಮಲ್ಪೆ ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ದುಷ್ಕರ್ಮಿಗಳು ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿದ್ದಾರೆ. ಇಂತಹ ಕೃತ್ಯವೆಸಗಿರುವ ಆರೋಪಿತರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಮಲ್ಪೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಸಮ್ಮಾನ ಮಾಡಿದ್ದಕ್ಕೆ ನಾನು ಕಾರಣ ಎಂಬ ನೆಪವೊಡ್ಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಾನು ಮಸೀದಿಗೆ ಭೇಟಿ ನೀಡಿದ ಫೊಟೋವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ತನ್ನ ತೇಜೋವಧೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ