ಉಡುಪಿಕುಂದಾಪುರ

ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಶನಿವಾರ (ಅ.26) ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ.ಘಟನೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನೆಯಲ್ಲಿ ನೀರುಪಾಲಾಗಿದ್ದ ಕುಂದಾಪುರ ಮೂಲದ ಅಜಯ್ ಮೃತಪಟ್ಟಿದ್ದು, ಬೆಂಗಳೂರು ದಾಸರಹಳ್ಳಿ ನಿವಾಸಿ ಸಂತೋಷ್ ನೀರುಪಾಲಾದ ಮತ್ತೊಬ್ಬ ಯುವಕನಾಗಿದ್ದು, ಈತನಿಗಾಗಿ ಹುಡುಕಾಟ ಮುಂದುವರೆದಿದೆ. ಜೊತೆಗೆ ಬಂದಿದ್ದ ಮೋಕ್ಷಿತ್ ಮತ್ತು ಶ್ರೀಯಾನ್ ಅಪಾಯದಿಂದ ಪಾರಾಗಿದ್ದಾರೆ.ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನ ದಾಸರಹಳ್ಳಿಯಿಂದ ಕುಂದಾಪುರಕ್ಕೆ ಬಂದಿದ್ದು ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ ವೊಂದರಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ ಅದರಂತೆ ಇಂದು (ಶನಿವಾರ) ಬೆಳಿಗ್ಗೆ ತನ್ನ ಇನ್ನಿಬ್ಬರು ಸ್ಥಳೀಯ ಸ್ನೇಹಿತರ ಜೊತೆ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಸಮುದ್ರಪಾಲಾಗಿದ್ದಾರೆ ಎನ್ನಲಾಗಿದೆ. ಈ ವೇಳೆ ಇಬ್ಬರು ಯುವಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕಾಪು ಜಿಲ್ಲೆಯಲ್ಲಿ ಧಾರಾಕಾರ ಮಳೆ – ಉದ್ಯಾವರದಲ್ಲಿ ತೋಡಿಗೆ ಬಿದ್ದು ವ್ಯಕ್ತಿ ಸಾವು

Udupilive News

ಬೈಂದೂರಿನಲ್ಲಿ‌ ಕಾಣಿಸಿಕೊಂಡ‌ ಚಡ್ಡಿ ಗ್ಯಾಂಗ್ !

Udupilive News

ಇಂದ್ರಾಳಿ ಸೇತುವೆ ಕಾಮಗಾರಿ ವೇಳೆ. ತಲೆಕೆಳಗಾಗಿ ಬಿದ್ದ ಕ್ರೇನ್.

Udupilive News

Leave a Comment