ಉಡುಪಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಪುಷ್ಪ ನಮನ

ಉಡುಪಿ:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಪ್ಪು ಅಭಿಮಾನಿಗಳ ಬಳಗ ಉಡುಪಿ ಜಿಲ್ಲೆ ಹಾಗೂ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರೀತಿಯ ಪುನೀತ್ ರಾಜಕುಮಾರ್ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆಯ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ DHO ಡಾ.ಐ.ಪಿ.ಗಡಾದ ಅವರು ಅಪ್ಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು,

ಅಪ್ಪು ಅಭಿಮಾನಿಗಳ ಬಳಗದಿಂದ ಶ್ರೀ ಗಿರೀಶ್ ಕಡ್ಡಿಪುಡಿ ಮಾತನಾಡಿ ಜಿಲ್ಲೆಯಲ್ಲಿ ಈ ವರೆಗೂ ಕೈಗೊಂಡ ಸಾಮಾಜಿಕ ಕೆಲಸಗಳ ಬಗ್ಗೆ ವಿವರಿಸಿದರೂ, ಇದಕ್ಕೆ DHO ರವರು ಮಾತನಾಡಿ ಉಡುಪಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮುಂದಿನ ದಿನಗಳಲ್ಲಿ ಅಪ್ಪು ಅಭಿಮಾನಿ ಬಳಗದೊಂದಿಗೆ ಜಿಲ್ಲೆಯಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಹೆಚ್ಚಿನ ರೀತಿಯಲ್ಲಿ ಆಯೋಜಿಸಿ, ನೇತ್ರದಾನ, ರಕ್ತದಾನ, ಹೃದಯ ಸಂಬಂಧಿ ಕಾಯಿಲೆಗಳ ವಿಷಯಗಳು ಮತ್ತು ಬಡ ನಿರ್ಗತಿಕ ರೋಗಿಗಳಿಗೆ ಸಹಾಯ ಹಸ್ತ ಚಾಚುದರೊಂದಿಗೆ ಜೊತೆಯಾಗಲಿದ್ದೇವೆ ಎಂದರು.

ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಪುಷ್ಪ ನಮನ ಗೈದು ತಮ್ಮ ಸಹಕಾರವನ್ನು ಸಹ ಸೂಚಿಸಿದರು.

ಅಪ್ಪು ಅಭಿಮಾನಿ ಬಳಗ ಉಡುಪಿ ಜಿಲ್ಲೆಯವತಿಯಿಂದ, ಪ್ರೀತಂ ಬಿ ಎಸ್, ಗುರುರಾಜ್ ಗಂಗಾಣಿ, ಮನು, ಗಗನ್ ವೀರೇಶ್, ರಕ್ಷಿತ್ ಹಾಗೂ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಮಹೇಶ್ ಗುಂಡಿಬೈಲು,ಸದಸ್ಯರು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಪ್ರೆಂಟಿಸ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

Udupilive News

ಪಡುತೋನ್ಸೆ ಬಳಿ ಗಾಂಜಾ‌ಮರಾಟಕ್ಕೆ ಯತ್ನ ಮೂವರ ಬಂಧನ

Udupilive News

ಗಣೇಶ್ ಪ್ರಸಾದ್ ಜಿ. ನಾಯಕ್ ಅವರಿಗೆ ಪಿ.ಎಚ್.ಡಿ

Udupilive News

Leave a Comment