ರಾಜ್ಯ

ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ:69 ಸಾಧಕರಿಗೆ ಗೌರವ

ಬೆಂಗಳೂರು, ಅ.30- ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನ್ತಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹ ನಿರ್ಮಿಸಿದ ಅರುಣ್ ಯೋಗಿರಾಜ್ ಹುಲಿಕಲ್ ನಟರಾಜ್ , ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾಚೌಧರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿಯಲ್ಲಿಂದು ಕಲೆ, ಸಾಹಿತ್ಯ, ಜಾನಪದ ಪರಿಸರ, ಕ್ರೀಡೆ, ಪತ್ರಿಕೋದ್ಯಮ, ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 69 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ತಶಸ್ತಿ ನೀಡಲಾಗಿದೆ ಎಂದು ತಿಳಿಸಿದರು.
ಇದೇವೇಳೆ ವಿವಿಧ ಸಾಧನೆ ಮಾಡಿದ 50 ಪುರುಷರು ಹಾಗೂ 59 ಮಹಿಳಾ ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ. ನವೆಂಬರ್ ಒಂದರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ 50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69+100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು
ಈ ಬಾರಿ ಪ್ರಶಸ್ತಿಗಾಗಿ ಒಟ್ಟು 1575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧು ಮೂಲಕ 1,309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕಷವಾಗಿ ಪರಿಶೀಲನೆ ಮಾಡಿ ಅರ್ಹರನ್ನು ಆಯ್ಕೆ ಮಾಡಲಾಗಿದೆ

ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿಧ್ಯ ನೀಡಲಾಗಿದೆ ಹಾಗೂ ಸಾಮಾಜಿಕ ನ್ಯಾಯ ಕಾಪಾಡಿಕೊಳ್ಳಲಾಗಿದೆ ಎಂದು ತಿಳಿಸಿದರು

Related posts

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ

Udupilive News

ಡಿಜಿಟಲ್ ಅರೆಸ್ಟ್ ಅಂತಾ ಬೆದರಿಸಿ ಜ್ಯೂವೆಲರಿ ಮಾಲಕನಿಗೆ ವಂಚಿಸಿದ ಕದೀಮ ಅರೆಸ್ಟ್

Udupilive News

ಬೇಲೆಕೇರಿ ಅದಿರು ನಾಪತ್ತೆ ಕೇಸ್‌ – 6 ಪ್ರಕರಣಗಳಲ್ಲೂ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್ ಗೆ 7 ವರ್ಷ ಜೈಲು

Udupilive News

Leave a Comment