ಉಡುಪಿ

ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೆರವೇರಿಸಿದರು.ಬಳಿಕ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಪಥ ಸಂಚಲದಲ್ಲಿ ಗೌರವ ವಂದನೆ ಸ್ವೀಕರಿಸಿದರು.
ಈ ವೇಳೆ ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್,ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ್ ಸುರೇಂದ್ರ ಅಡಿಗ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು

Related posts

ಕುಂದಾಪುರ:ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ ,ಹಾನಿ

Udupilive News

ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವಿಳಂಬ ಖಂಡಿಸಿ ಸೇತುವೆ ಹೋರಾಟ ಸಮಿತಿಯಿಂದ ಪ್ರತಿಭಟನೆ

Udupilive News

ಬೈಕ್ ಕಾರು ನಡುವೆ ಅಪಘಾತ ; ಬೈಕ್ ಸವಾರರಿಬ್ಬರು ಗಂಭಿರ

Udupilive News

Leave a Comment