ಉಡುಪಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಉಡುಪಿ: 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು.ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ. ಅರುಣ್, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಮೊದಲಾದವರು ಹಾಜರಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಉಪಾಧ್ಯಕ್ಷ ಬಾಲಕೃಷ್ಣ ಉಚ್ಚಿಲ, ಕಾರ್ಯದರ್ಶಿ ರಹೀಂ ಉಜಿರೆ, ಪ್ರಮೋದ್ ಸುವರ್ಣ, ರಾಜೇಶ್ ಅಚ್ಲಾಡಿ, ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ, ಜತೆ ಕಾರ್ಯದರ್ಶಿ ದೀಪಕ್ ಜೈನ್, ಸಂಘದ ಮಾಜಿ ಅಧ್ಯಕ್ಷ ದಿನೇಶ್ ಕಿಣಿ, ಕುಂದಾಪುರ ತಾಲೂಕು ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ಹೆಬ್ರಿ ತಾಲೂಕು ಅಧ್ಯಕ್ಷ ಸುಕುಮಾರ್ ಮುನಿಯಾಲು ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು

Related posts

ದುಬೈನ ಫಾರ್ಚ್ಯೂನ್ ಸಂಸ್ಥೆಗೆ 2.5 ಕೋಟಿ ವಂಚಿಸಿ‌ ಬಂಧನಕ್ಕೊಳಗಾಗಿದ್ದ ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ

Udupilive News

ಕಂಬಳ ಪ್ರಿಯರಿಗೆ ಶಾಕಿಂಗ್ ನ್ಯೂಸ್.! ಕಂಬಳ ನಿಲ್ಲಿಸುವಂತೆ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ‘ಪೆಟಾ’

Udupilive News

ಸಹಕಾರ ಭಾರತಿ,ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ದಿನೇಶ್ ಹೆಗ್ಡೆ ಆತ್ರಾಡಿ ಆಯ್ಕೆ.

Udupilive News

Leave a Comment