ಉಡುಪಿ

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ; ಗೋಡೆಗಳು ಛಿದ್ರ ಛಿದ್ರ

ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡ ಮನೆಯವರು

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಇಂದು ರಾತ್ರಿ ಸಂಭವಿಸಿದೆ.

ಗ್ಯಾಸ್ ಸಿಲಿಂಡರ್ ಲೀಕ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದ್ದಾರೆ.

ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದ ಸೊತ್ತುಗಳು ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ.

Related posts

ಅನಾರೋಗ್ಯ ಪೀಡಿತ ಕುಟುಂಬದ ಮನೆಗೆ ತೆರಳಿ ಆಧಾರ್ ತಿದ್ದುಪಡಿ:ಅಂಚೆ ಅಧಿಕಾರಿಗಳ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ

Udupilive News

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಇಡೀ ದೇಶಕ್ಕೆ ಪಂಚ ಗ್ಯಾರಂಟಿ ಯೋಜನೆಗಳು ಮಾದರಿ ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

Udupilive News

ದೇಶದಲ್ಲಿಯೇ ಹೆಚ್ಚು ಆದಾಯ ಹೊಂದಿರುವ ರಾಜ್ಯ ಕರ್ನಾಟಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Udupilive News

Leave a Comment