ಬೆಳ್ತಂಗಡಿ: ತಾಲೂಕಿನ ಮಿತ್ತಬಾಗಿಲು ನಿವಾಸಿ, ಪಿಯುಸಿ ವಿದ್ಯಾರ್ಥಿನಿ ಋಷಿ (17) ವಿಷಸೇವಿಸಿ ಅತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ