ರಾಜ್ಯ

ಮುರುಡೇಶ್ವರ | ಸಮುದ್ರದಲ್ಲಿ ಆಟವಾಡುತ್ತಿದ್ದ 7 ವಿದ್ಯಾರ್ಥಿನಿಯರು ನೀರುಪಾಲು; ಮೂವರ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಆಟವಾಡುತಿದ್ದ 7 ಜನ ವಿದ್ಯಾರ್ಥಿನಿಯರು ಅಲೆಗಳ ಹೊಡೆತಕ್ಕೆ ನೀರುಪಾಲಾಗಿದ್ದು, ಓರ್ವ ವಿದ್ಯಾರ್ಥಿನಿ ಸಾವು ಕಂಡರೇ ಮೂವರು ಕಾಣೆಯಾಗಿದ್ದು, ಮೂರು ಜನ ವಿದ್ಯಾರ್ಥಿನಿಯರನ್ನು ಲೈಫ್ ಗಾರ್ಡ್‌ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಟಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲಿನಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿನಿಯರು ಬುಧವಾರ ಸಂಜೆ ಕಡಲಿನಲ್ಲಿ ಆಟವಾಡಲು ಇಳಿದಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಏಳು ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು.

ಈ ಸಂದರ್ಭದಲ್ಲಿ ಲೈಫ್‌ಗಾರ್ಡಗಳು ಯಾವುದೇ ಪರಿಕರ ಸಾಧನ ಇಲ್ಲದಿದ್ದರೂ ಮೂರು ಜನ ವಿದ್ಯಾರ್ಥಿನಿಯರನ್ನು ರಕ್ಷಣೆ ಮಾಡಿದ್ದು ಓರ್ವ ವಿದ್ಯಾರ್ಥಿನಿ ಸಾವು ಕಂಡರೇ ಇನ್ನೂ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶಾವಂತಿ (15) ಸಾವು ಕಂಡ ವಿದ್ಯಾರ್ಥಿನಿಯಾಗಿದ್ದು ಮುಳಬಾಗಿಲಿನ ಯಶೋಧ, ವೀಕ್ಷಣಾ , ಲಿಪಿಕಾ ರಕ್ಷಣೆಗೊಳಗಾದವರಾಗಿದ್ದು ಇವರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿದ್ದು ಮೂವರಿಗೂ ಭಟ್ಕಳ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Related posts

ಉಡುಪಿ : ಗೀತಾಂಜಲಿ ಪುರುಷರ ವಸ್ತ್ರ ಮಳಿಗೆ ಉದ್ಘಾಟನೆ

Udupilive News

ಕಂಬಳ ಪ್ರಿಯರಿಗೆ ಶಾಕಿಂಗ್ ನ್ಯೂಸ್.! ಕಂಬಳ ನಿಲ್ಲಿಸುವಂತೆ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ‘ಪೆಟಾ’

Udupilive News

6 ಜನರ ಮೇಲೆ ಎಫ್‌ಐಆರ್ ದಾಖಲು – ಹನಿಟ್ರ್ಯಾಪ್‌ಗೆ ಮುಮ್ತಾಜ್ ಅಲಿ ಬಲಿ?

Udupilive News

Leave a Comment