ಅಂತಾರಾಷ್ಟ್ರೀಯರಾಷ್ಟ್ರೀಯ

ಮುಂದಿನ 5 ವರ್ಷದಲ್ಲಿ ಆಟೋಮೊಬೈಲ್ ಉದ್ಯಮದಲ್ಲಿ ವಿಶ್ವದಲ್ಲೇ ಭಾರತ ನಂಬರ್‌ 1: ಗಡ್ಕರಿ ಭವಿಷ್ಯ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತೀಯ ಆಟೋಮೊಬೈಲ್ ಉದ್ಯಮವು (Indian Automobile Business) ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ (Nitin Gadkari) ಭವಿಷ್ಯ ನುಡಿದಿದ್ದಾರೆ.

ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಕಷ್ಟು ಮಾನವಶಕ್ತಿ, ಕಚ್ಚಾ ಸಾಮಗ್ರಿಗಳು ಇಲ್ಲೇ ದೊರೆಯುವುದರಿಂದ ಭಾರತದ ಆಟೋಮೊಬೈಲ್ ಉದ್ಯಮವು ವೇಗವಾಗಿ ಬೆಳವಣಿಗೆಯಾಗುತ್ತಿದೆ ಎಂದು ಹೇಳಿದರು.

ಪಳೆಯುಳಿಕೆ ಇಂಧನ ಚಾಲಿತ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗುವುದರಿಂದ ಆರ್ಥಿಕವಾಗಿ ಲಾಭದಾಯಕವಾಗಲಿದೆ ಎಂದು ಕೇಂದ್ರ ಸಚಿವರು ಹೇಳಿದರು

ದೇಶದಲ್ಲಿ ವಾಹನ ಫಿಟ್‌ನೆಸ್ ಕೇಂದ್ರಗಳು ಮತ್ತು ಚಾಲನಾ ಕೇಂದ್ರಗಳಿಗೆ ಹೊಸ ಯೋಜನೆ ಪರಿಚಯಿಸುವ ಕುರಿತು ಮಾತನಾಡಿದ ಅವರು, ನಾವು ಈ ಉಪಕ್ರಮಕ್ಕಾಗಿ ಹೊಸ ಯೋಜನೆಯನ್ನು ಪ್ರಾರಂಭಿಸುತ್ತಿದ್ದೇವೆ, ದೇಶದ ಪ್ರತಿ ಜಿಲ್ಲೆಯಲ್ಲಿ ನಾಲ್ಕರಿಂದ ಐದು ಫಿಟ್‌ನೆಸ್ ಕೇಂದ್ರಗಳಿದ್ದರೆ, ಹತ್ತರಿಂದ ಇಪ್ಪತ್ತು ಚಾಲಕ ತರಬೇತಿ ಕೇಂದ್ರಗಳು ಇರುತ್ತವೆ ಎಂದು ಅವರು ತಿಳಿಸಿದರು.

ಭಾರತೀಯ ರಸ್ತೆಗಳಿಂದ ಹಳೆಯ ಮತ್ತು ಯೋಗ್ಯವಲ್ಲದ ವಾಹನಗಳನ್ನು ತೆಗೆದುಹಾಕುವ ಉದ್ದೇಶದಿಂದ ವೆಹಿಕಲ್ ಸ್ಕ್ರ್ಯಾಪಿಂಗ್ ನೀತಿಯನ್ನು 2021 ರಲ್ಲಿ ಪ್ರಾರಂಭಿಸಲಾಗಿದೆ. ಮಾಲಿನ್ಯವನ್ನು ಕಡಿಮೆ ಮಾಡುವುದು ಮತ್ತು ಸ್ವಚ್ಛವಾದ ಸಾರಿಗೆ ವಿಧಾನಗಳನ್ನು ಉತ್ತೇಜಿಸಲು ಉದ್ದೇಶವನ್ನು ಈ ನೀತಿ ಹೊಂದಿದೆ.

Related posts

ಡಿಜಿಟಲ್ ಅರೆಸ್ಟ್ ಅಂತಾ ಬೆದರಿಸಿ ಜ್ಯೂವೆಲರಿ ಮಾಲಕನಿಗೆ ವಂಚಿಸಿದ ಕದೀಮ ಅರೆಸ್ಟ್

Udupilive News

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ

Udupilive News

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಎ1 ಆರೋಪಿ ಆಯಿಷಾ ಬಂಧನ

Udupilive News

Leave a Comment