ಉಡುಪಿ

ಉಡುಪಿ: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ!

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಕಾಣೆಯಾದವರ ಚಹರೆ: ಲಕ್ಷ್ಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ.

ಅಪೂರ್ವ 3 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಶ್ರೇಯಾ 3 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ.

ಮನೋಜ್ 2 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಬಾಗಿಲ ಬಳಿಯಿಟ್ಟಿದ್ದ ಕೀ ಬಳಸಿ ಕಳ್ಳತನ .ಅರೋಪಿ ಬಂಧನ.

Udupilive News

ಉಡುಪಿ ಜಾಮೀಯ ಮಸೀದಿಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

Udupilive News

ಗಣೇಶ್ ಪ್ರಸಾದ್ ಜಿ. ನಾಯಕ್ ಅವರಿಗೆ ಪಿ.ಎಚ್.ಡಿ

Udupilive News

Leave a Comment