ಅಂತಾರಾಷ್ಟ್ರೀಯಉಡುಪಿರಾಜ್ಯ

ಡಿಜಿಟಲ್ ಅರೆಸ್ಟ್ ಅಂತಾ ಬೆದರಿಸಿ ಜ್ಯೂವೆಲರಿ ಮಾಲಕನಿಗೆ ವಂಚಿಸಿದ ಕದೀಮ ಅರೆಸ್ಟ್

ಉಡುಪಿ:ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89 ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ ಒಟ್ಟು ಏಳು ಲಕ್ಷ ರೂ. ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉಡುಪಿಯ ಜ್ಯುವೆಲ್ಲರಿ ಅಂಗಡಿ ಮಾಲಕ ಕನ್ನಾರ್ ಸಂತೋಷ ಕುಮಾರ್(45) ಎಂಬವರಿಗೆ ಸೆಪ್ಟೆಂಬರ್ 11ರಂದು ಅಪರಿಚಿತರು ಕರೆ ಮಾಡಿ, ಅಕ್ರಮ ಜಾಹೀರಾತು, ಸಂದೇಶ ಕಳುಹಿಸುವುದಕ್ಕೆ ನಿಮ್ಮ ಮೇಲೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ನಿಮ್ಮ ಮೇಲೆ ಅರೆಸ್ಟ್ ವಾರಂಟು ಆಗಿರುವುದಾಗಿ ಬೆದರಿಸಿದ್ದರು.

ನಂತರ ಪೊಲೀಸ್‌ ಅಧಿಕಾರಿ ಸಮವಸ್ತ್ರದಲ್ಲಿ ವಾಟ್ಸಪ್ ವಿಡಿಯೋ ಕರೆ ಮಾಡಿ, ಮನಿ ಲಾಂಡ್ರಿಂಗ್ ಕೇಸ್‌ನಲ್ಲಿ ಭಾಗಿಯಾಗಿರುವುದಾಗಿ ತಿಳಿಸಿ ಆದಾಯದ ಮೂಲ ಪರಿಶೀಲನೆ ಮಾಡುವುದಾಗಿ ಹೇಳಿ, ವರ್ಚುವಲ್ ಅರೆಸ್ಟ್ ಮಾಡುವುದಾಗಿ ಬೆದರಿಸಿದ್ದರು.

ಅದರಂತೆ ಸಂತೋಷ್ ಕುಮಾ‌ರ್ ಬೆದರಿಸಿ ಅವರಿಂದ 89,00,000ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚನೆ ಎಸಗಿದ್ದರು. ಈ ಬಗ್ಗೆ ಸಂತೋಷ್ ಕುಮಾರ್ ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related posts

ಪ್ರತಿಷ್ಟಿತ ಭಾರತ್ ಬ್ಯಾಂಕಿಗೆ ಬೆಸ್ಟ್ ಹೆಚ್ ಅರ್ ಮ್ಯಾನೇಜ್ಮೆಂಟ್ ಅವಾರ್ಡ್

Udupilive News

ಸುರತ್ಕಲ್: “ನಿನ್ನನ್ನು 24 ತುಂಡು ಮಾಡುವೆ” ಎಂದು ಬೆದರಿಕೆ; ಯುವತಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ – ಆರೋಪಿ ಬಂಧನ .

Udupilive News

ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಟೂರ್ನಮೆಂಟ್- ಬ್ಲೇಸರ್ ತಂಡಕ್ಕೆ ಪ್ರಶಸ್ತಿ

Udupilive News

Leave a Comment