ಉಡುಪಿಕುಂದಾಪುರ

ಮಾರಿ ಜಾತ್ರಾ ಮಹೋತ್ಸವ : ಮದ್ಯ ಮಾರಾಟ ನಿಷೇಧ

ಉಡುಪಿ: ಕುಂದಾಪುರ ತಾಲೂಕಿನ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿಯಲ್ಲಿ ಮಾರಿ ಜಾತ್ರಾ ಮಹೋತ್ಸವವು ಫೆಬ್ರವರಿ 4 ರಿಂದ 6 ರ ವರೆಗೆ ನಡೆಯಲಿದ್ದು, ಫೆ. 5 ರಂದು ಊರಿನ ಹಾಗೂ ಪರವೂರಿನ ಭಕ್ತಾದಿಗಳು ದೇವಿಗೆ ಹರಕೆ, ಪೂಜೆಗಳನ್ನು ನೆರೆವೇರಿಸಲು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ ಹಾಗೂ ಗುಜ್ಜಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯಮಾರಾಟವನ್ನು ಫೆ. 5 ರ ಬೆಳಗ್ಗೆ 6 ಗಂಟೆಯಿAದ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನವೆಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

Related posts

ಆಲ್ವಿನ್ ಡಿಸೋಜಾ ಹಲ್ಲೆಕೋರರನ್ನು ಶೀಘ್ರ ಬಂಧಿಸಿ – ಕಥೊಲಿಕ್ ಸಭಾ ಉಡುಪಿ ಪ್ರದೇಶ ಆಗ್ರಹ

Udupilive News

ಅ.29ರಂದು ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಬೃಹತ್ ಪ್ರತಿಭಟನೆ

Udupilive News

ಯೋಗ ಎನ್ನುವುದು ಮಾಹಿತಿ‌ ಅಲ್ಲ,ಅದನ್ನು ಜಗತ್ತಿನ ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವ ಆಕಾಂಕ್ಷೆ ಇದೆ.ಬಾಬಾ ರಾಮ್ ದೇವ್

Udupilive News

Leave a Comment