ಮಣಿಪಾಲ: ಉಡುಪಿ ಮಣಿಪಾಲ ರಸ್ತೆಯ ದಶರಥನಗರದ
ಡಿ.ಕ್ಲಾಸಿಕೋ ಲಾಡ್ಜ್ ಗೆ ದಾಳಿ ನಡೆಸಿರುವ ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಚುಮಾನ್‌ರಾಮ್ ಬಂಧಿತ ಆರೋಪಿ.
ಈತ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ. ಲಾಡ್ಜ್‌ಗೆ ದಾಳಿ ಮಾಡಿದ ಪೊಲೀಸರು ನೊಂದ ಮಹಿಳೆಯರನ್ನು ರಕ್ಷಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.