ಬ್ರಹ್ಮಾವರ: ಬ್ರಹ್ಮಾವರದ ಮೆಸ್ಕಾಂ ಕಚೇರಿ ಮೇಲೆ
ಶುಕ್ರವಾರ ಲೋಕಾಯುಕ್ತ ದಾಳಿ ನಡೆದಿದೆ. ದಾಳಿಯಲ್ಲಿ ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಪೂಜಾರಿ ಲಂಚ ಸ್ವೀಕರಿಸುತ್ತಿರುವಾಗಲೇ ಸಿಕ್ಕಿಬಿದ್ದಿದ್ದಾರೆ.
ಸಾರ್ವಜನಿಕರ ದೂರಿನ ಮೇರೆಗೆ ದಾಳಿ ನಡೆಸಿ, ಇಪ್ಪತ್ತು ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಪೂಜಾರಿ ಅವರನ್ನು ವಶಕ್ಕೆ ಪಡೆಯಲಾಗಿದೆ.
ಈ ಹಿಂದೆ ಕುಂದಾಪುರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದ ಅಶೋಕ್ ಪೂಜಾರಿ, ಕಳೆದ 3-4 ವರ್ಷಗಳಿಂದ ಬ್ರಹ್ಮಾವರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.