ಕುಂದಾಪುರಬೈಂದೂರುಬ್ರಹ್ಮಾವರಮಾಬುಕಳ| ಅಪರಿಚಿತ ವಾಹನ ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಸಾವು! by Udupilive NewsJune 10, 2025June 10, 20250 Share0 ಕೋಟ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪಾದಚಾರಿ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಐರೊಡಿ ಪಂಚಾಯತ್ ಎದುರುಗಡೆ ಸಂಭವಿಸಿದೆ. ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಸುಮಾರು 35 ವರ್ಷದ ಯುವಕ ಎಂದು ಗುರುತಿಸಲಾಗಿದೆ. ವ್ಯಕ್ತಿಯ ತಲೆಯ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ವ್ಯಕ್ತಿಯ ಗುರುತು ಪತ್ತೆ ಹಾಗೂ ವ್ಯಕ್ತಿಯ ಮೇಲೆ ಹರಿದ ವಾಹನದ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕೋಟ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬ್ರಹ್ಮಾವರ ಶವಗಾರಕ್ಕೆ ಸಾಗಿಸಿರುತ್ತಾರೆ.