ರಾಜ್ಯ

ರಾಜ್ಯದಲ್ಲಿ ಕೊರೋನಾ ದಿಢೀರ್ ಹೆಚ್ಚಳ; ಇಂದು 265 ಮಂದಿಗೆ ಪಾಸಿಟಿವ್

ಇನ್ನೂ ರಾಜ್ಯದಲ್ಲಿ ಇಂದು ಮಹಾಮಾರಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮತ್ತೆ ದಿಢೀರ್ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 265 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1220ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಇಂದು ಮಹಾಮಾರಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು ಒಟ್ಟು 650 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 265 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಪಾಸಿಟಿವ್ ಪ್ರಮಾಣ ಶೇ.40ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಒಟ್ಟು 559 ಸಕ್ರಿಯೆ ಪ್ರಕರಣಗಳಿದ್ದು, ಈ ಪೈಕಿ 552 ಮಂದಿ ಮನೆ ಆರೈಕೆಯಲ್ಲಿದ್ದಾರೆ ಮತ್ತು 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.

Related posts

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು. ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’ಎಂದ ವಿಜಯೇಂದ್ರ

Udupilive News

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಸನ್ಮಾನ ಪ್ರಕರಣ :ಪ್ರತಿಗಾಮಿ ಶಕ್ತಿಗಳು ರಾಷ್ಟ್ರ ಭಕ್ತಿಯ ಹೆಸರಿನಲ್ಲಿ ರಾಷ್ಟ್ರದ್ರೋಹದ ಕೆಲಸ ಮಾಡುತ್ತಿವೆ – ಇದ್ರೀಸ್ ಹೂಡೆ

Udupilive News

ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿ.ಎಂ ಘೋಷಣೆ

Udupilive News

Leave a Comment