ಉಡುಪಿ

ಉಡುಪಿ: ಜೂ‌ನ್ 15ರಂದು ನೇತ್ರದಾನ- ನೇತ್ರದಾನ ಜಾಗೃತಿ ಶಿಬಿರ

ಉಡುಪಿ: ಕಾಂಗ್ರೆಸ್ ಮುಖಂಡ, ಉದ್ಯಮಿ ಪ್ರಸಾದ್ ಕಾಂಚನ್ ಅವರ ಜನ್ಮದಿನದ ಅಂಗವಾಗಿ ಇದೇ ಜೂನ್ 15ರಂದು ಬೆಳಿಗ್ಗೆ 9ರಿಂದ 1ಗಂಟೆಯವರೆಗೆ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ‘ನೇತ್ರದಾನ ಹಾಗೂ ನೇತ್ರದಾನ ಜಾಗೃತಿ ಶಿಬಿರ’ವನ್ನು ಆಯೋಜಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದೇಶ್ ಶೆಟ್ಟಿ ಅವರು, ನೇತ್ರದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಮತ್ತು ತಮ್ಮ ಕಣ್ಣುಗಳನ್ನು ದಾನ ಮಾಡಲು ಇಚ್ಛಿಸುವವರಿಗೆ ಅನುಕೂಲ ಮಾಡಿಕೊಡುವುದು ಈ ಶಿಬಿರದ ಮುಖ್ಯ ಉದ್ದೇಶ ಎಂದರು.

ಪ್ರಸಾದ್ ನೇತ್ರಾಲಯ ಉಡುಪಿ ಇವರ ಸಹಯೋಗದೊಂದಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಭವನದ ಜೊತೆಗೆ ಏಕಕಾಲದಲ್ಲಿ ಉಡುಪಿ ಸರ್ವಿಸ್ ಬಸ್ ಸ್ಟ್ಯಾಂಡ್ ಹತ್ತಿರ ಕ್ಲಾಕ್ ಟವರ್ ಎದುರು, ಮಣಿಪಾಲದ ಕೆನರಾ ಮಾಲ್ ಹತ್ತಿರ ಹಾಗೂ ಬ್ರಹ್ಮಾವರ ಬಸ್ ಸ್ಟ್ಯಾಂಡ್ ಹತ್ತಿರ ಶಿಬಿರ ನಡೆಯಲಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ವಿನಿಂತಿಸಿದರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಜ್ಜನ್ ಶೆಟ್ಟಿ, ಎನ್ಎಸ್ ಯುಐ ಉಪಾಧ್ಯಕ್ಷ ಶರತ್ ಕುಂದರ್ ಉಪಸ್ಥಿತರಿದ್ದರು.

Related posts

ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

Udupilive News

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಪುಷ್ಪ ನಮನ

Udupilive News

ನ.9ರಂದು ಉಡುಪಿಯಲ್ಲಿ “ನನ್ನ ನಾಡು ನನ್ನ ಹಾಡು” ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆ

Udupilive News

Leave a Comment