ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿದೆ. ಬೈಂದೂರಿನ ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿಯುತ್ತಿದ್ದು, ನದಿ ಪಾತ್ರ, ನಾಡ, ನಾವುಂದ, ಮರವಂತೆ, ಬಡಾಕೆರೆ ಚಿಕ್ಕಳ್ಳಿ ಪಡುಕೋಣೆ ಆನಗಳ್ಳಿ ಹಳಗೇರಿ ಬಿಜೂರು ರಾತ್ರೋರಾತ್ರಿ ನೆರೆ ಕಾಣಿಸಿಕೊಂಡಿದೆ ಜನ ಜೀವನ ಅಸ್ತವ್ಯಸ್ತ
ವರ್ಷ ಮಳೆಗಾಲ ಬಂದರೆ ನಮಗೆ ಸಮಸ್ಯೆ ತಪ್ಪಿದ್ದಲ್ಲ. ಮಳೆಗಾಲದಲ್ಲಿನ ಇಲ್ಲಿನ ನೂರಕ್ಕೂ ಅಧಿಕ ಮನೆಯವರಿಗೆ ತಲೆನೋವು ಕಟ್ಟಿಟ್ಟಬುತ್ತಿ. ಹೆಚ್ಚುಕಮ್ಮಿ ನಾಲ್ಕೈದು ದಿನವಾದರೂ ಮನೆ ಬಿಟ್ಟು ಹೊರಬಾರಲಾಗದ ದುಸ್ಥಿತಿ. ಹಿಡಿ ಉಪ್ಪು, ದಿನಸಿ, ತರಕಾರಿ ತರಬೇಕಾದರೂ ಕೂಡ ದೋಣಿ ಬೇಕು…
ಓಟು ಕೇಳಲು ಬರುವ ಜನಪ್ರತಿನಿಧಿಗಳು ಮಳೆಗಾಲದ ನೆರೆ ಸಮಯ ಬಂದು ವೀಕ್ಷಿಸಿ ಹೋದವರು ಮತ್ತೆ ಈ ಕಡೆ ತಲೆಯನ್ನು ಹಾಕೋದಿಲ್ಲ. ಸರ್ಕಾರಿ ಅಧಿಕಾರಿಗಳು ಮಳೆಗಾಲದ ಮೊದಲು ಪ್ರವಾಹದ ಬಂದು ಸ್ಥಳವನ್ನು ವೀಕ್ಷಿಸುತ್ತಾರೆ ಹೊರತು ಇದುವರೆಗೂ ಯಾವುದೇ ಪ್ರಯೋಜನವಾಗಲಿಲ್ಲ.
ಯುವಕರು ಯುವಕರು ಮೀನುಗಾರರ ಶ್ರಮದಾನ…
ನಾವುಂದ, ಹಳಗೇರಿ ಬಡಾಕೆರೆ,ಮರವಂತೆ ಸಾಲ್ಬುಡ, ಅರೆಹೊಳೆ, ಕೋಣ್ಕಿ, ಕುದ್ರು, ಚಿಕ್ಕಳ್ಳಿ, ಪಡುಕೋಣೆ ಭಾಗದಲ್ಲಿ ನೆರೆ ಸಮಸ್ಯೆ ಈ ವರ್ಷವೇನೂ ಹೊಸತಲ್ಲ. ಹಲವು ದಶಕಗಳಿಂದ ಇಲ್ಲಿನ ಜನಕ್ಕೆ ಮಳೆಗಾಲ ಶಾಪವೆಂದರೂ ತಪ್ಪಾಗದು. ಮಳೆಗಾದಲ್ಲಿ ಇಲ್ಲಿಗಾಗಿ ಮೂರ್ನಾಲ್ಕು ದೋಣಿ ಇಲ್ಲಿಗೆ ಮೀಸಲಿಡಬೇಕು. ಅನಾರೋಗ್ಯ ಪೀಡಿತರು ಸಹಿತ ಆಹಾರ ಸಾಮಾಗ್ರಿ, ದಿನಸಿ ತರಬೇಕಾದರೆ ದೋಣಿ ಏರಿ ಪೇಟೆಗೆ ಬರಬೇಕು. ಒಂದು ದಡದಿಂದ ಮತ್ತೊಂದು ದಡಕ್ಕೆ ಸುಮಾರು ಮೂರು ಕಿಲೋಮೀಟರ್ ದೂರ ದೋಣಿ ಚಲಾಯಿಸುವುದು ನಿಜಕ್ಕೂ ಸಾಹಸವಾಗಿದೆ. ಪ್ರತಿವರ್ಷ ಮಳೆಗಾಲದಲ್ಲಿ ಈ ಭಾಗದ ಯುವಕರ ಸಹಿತ ದೋಣಿ ಚಲಾಯಿಸಲು ತಿಳಿದವರು ಹಲವು ಮಂದಿ ದೋಣಿ ಯಾನದ ಮೂಲಕ ಸಾರ್ವಜನಿಕರಿಗೆ ನೆರವಾಗುವ ಸಾಹಸಿಗಳಾಗಿ ಶ್ರಮದಾನ ಮಾಡುತ್ತಾರೆ.
ಭಾರೀ ಮಳೆಯಿಂದಾಗಿ ಕಂಬದಕೋಣೆ ಗ್ರಾಮದ ಹಳಗೇರಿಯಲ್ಲಿ ಎಡಮಾವಿನಹೊಳೆ ಉಕ್ಕಿ ಹರಿಯುತ್ತಿದ್ದು ಸುತ್ತ ಮುತ್ತಲ ಪ್ರದೇಶಗಳು ಜಲಾವೃತಗೊಂಡು ಜನ ಜೀವನ ಅಸ್ತವ್ಯಸ್ತಗೊಂಡಿದೆ. ನೆರೆಯ ಪರಿಣಾಮ ಹಲವು ಮನೆಗಳು, ಗದ್ದೆಗಳು ಜಲಾವೃತಗೊಂಡಿದ್ದು ಸ್ಥಳಕ್ಕೆ ಶಾಸಕ ಗಂಟಿಹೊಳೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ, ಜೊತೆಗೆ ಸಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದೆ.ಮನೆಯವರನ್ನು ದೋಣಿ ಮೂಲಕ ಸ್ಥಳಾಂತರಿಸುವ ಕಾರ್ಯವಾಗುತ್ತಿದೆ.
ಅಗ್ನಿಶಾಮಕದ ಸಿಬ್ಬಂದಿಗಳು ಬೆಳಿಗ್ಗೆಯಿಂದ ಕೂಡ ನರೇ ಪ್ರದೇಶಕ್ಕೆ ಕಾರ್ಯಚರಣೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಆಡಳಿತ ಅಧಿಕಾರಿಗಳು.
ಬೈಂದೂರು ಅಗ್ನಿಶಾಮಕದ ಸಿಬ್ಬಂದಿಗಳು ಬೈಂದೂರು ಆರಕ್ಷಕ ಠಾಣಾ ಸಿಬ್ಬಂದಿ ಗ್ರಾಮ ಪಂಚಾಯತ್ ಕಂಬದಕೋಣೆ ನಾವುಂದ ,ಗ್ರಾಮ ಪಂಚಾಯತ್ ನಾಡ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಂತೆ ಸಾರ್ವಜನಿಕ ಸೂಚಿಸಿದರು.