ದಕ್ಷಿಣ ಕನ್ನಡಮಂಗಳೂರು

ಮಂಗಳೂರು| ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಯುವ ವೈದ್ಯ ಸ್ಥಳದಲ್ಲೇ ಸಾವು

ಮಂಗಳೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಡಿದು 2-3 ಪಲ್ಟಿಯಾಗಿ ಸ್ಥಳದಲ್ಲೇ ಯುವ ವೈದ್ಯ ಸಾವನ್ನಪ್ಪಿದ ಘಟನೆ ನಗರದ ನಂತೂರಿನ ತಾರೆತೋಟ ಬಳಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ಮೂಲತಃ ಕೇರಳದ ಆಲಪ್ಪುಝ ನಿವಾಸಿಯಾಗಿದ್ದು, ದೇರಳಕಟ್ಟೆ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಮುಗಿಸಿ ಅಲ್ಲಿಯೇ ಡ್ಯೂಟಿಗೆ ಸೇರಿದ್ದ ಡಾ.ಮೊಹಮ್ಮದ್ ಅಮಲ್ (29) ಮೃತರು ಎಂದು ಗುರುತಿಸಲಾಗಿದೆ.

ರಾತ್ರಿ 11.45ರ ಸುಮಾರಿಗೆ ಇವರು ತನ್ನ ಗೆಳತಿ, ಕಣಚೂರು ಮೆಡಿಕಲ್ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿನಿ ಜೊತೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ನಂತೂರಿನಿಂದ ಪಂಪೈಲ್ ಕಡೆಗೆ ತನ್ನ ಸಿಯಾಝ್ ಕಾರಿನಲ್ಲಿ ತೆರಳುತ್ತಿದ್ದಾಗ ಹೆದ್ದಾರಿ ಪ್ರಾಧಿಕಾರದ ಕಚೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿದ್ದು, ಅತಿ ವೇಗದಿಂದಾಗಿ ಡಿವೈಡರ್ ತಾಗಿ ನಡುವೆ ಹಾಕಿರುವ ಗ್ರಿಲ್ಸ್ ಮೇಲೆ ಹೋಗಿದೆ. ಆನಂತರ ಗ್ರಿಲ್ಸ್ ತಾಗಿಕೊಂಡೇ 2-3 ಪಲ್ಟಿಯಾಗಿ ರಸ್ತೆಯ ಮೇಲೆ ಬಿದ್ದಿದೆ. ಕಾರು ಚಲಾಯಿಸುತ್ತಿದ್ದ ವೈದ್ಯ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

Related posts

ಉಡುಪಿಯಲ್ಲಿ ಲವ್ ಜಿಹಾದ್? ಇಸ್ಲಾಂಗೆ ಕನ್ವರ್ಟ್ ಆಗುವಂತೆ ವಿದ್ಯಾರ್ಥಿನಿಗೆ ಕಿರುಕುಳ ಆರೋಪ : ವೈದ್ಯ ಅರೆಸ್ಟ್!

Udupilive News

ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Udupilive News

ಕಂಬಳ ಪ್ರೇಮಿಗಳಿಗೆ ಸಿಹಿಸುದ್ದಿ .ಈ ಬಾರಿಯ ಕಂಬಳ ವೇಳಾಪಟ್ಟಿ ಬಿಡುಗಡೆ

Udupilive News

Leave a Comment