ಉಡುಪಿ

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ ಕೆ ಅಧಿಕಾರ ಸ್ವೀಕಾರ

ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ ಕೆ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮನ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.ಮಂಗಳವಾರ ಸಂಜೆ ರಾಜ್ಯ ಸರಕಾರ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರನ್ನು ವರ್ಗಾವಣೆಗೊಳಿಸಿ 2012 ನೇ ಬ್ಯಾಚಿನ ಐಎ ಎಸ್ ಅಧಿಕಾರಿ ಸ್ವರೂಪ ಟಿ ಕೆ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿತ್ತು.ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಎಎಸ್ಪಿ ಕಾರ್ಕಳ ಹರ್ಷಂ ಪ್ರಿಯಂ ವಧಾ, ಕುಂದಾಪುರ ಸಹಾಯಕ ಕಮೀಷನರ್ ರಶ್ಮೀ ಹಾಗೂ ಇತರರು ಉಪಸ್ಥೀತರಿದ್ದರುಟೈಕ್ಸ್ಟೈಲ್ ಇಂಜಿನಿಯರಿಂಗ್ನಲ್ಲಿ ಐಐಟಿ ದಿಲ್ಲಿಯಿಂದ ಎಂಟೆಕ್ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್ಡಿಪಿಆರ್ ಇಲಾಖೆಯಲ್ಲಿ ಇ-ಗವರ್ನೆನ್ಸ್ನ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್ನ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು.2023ರ ಜುಲೈ 14ರಿಂದ ಉಡುಪಿಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಡಾ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದ್ದು, ಯಾವುದೇ ಹುದ್ದೆಯನ್ನು ತೋರಿಸಿಲ್ಲ.

Related posts

ಬಾಗಿಲ ಬಳಿಯಿಟ್ಟಿದ್ದ ಕೀ ಬಳಸಿ ಕಳ್ಳತನ .ಅರೋಪಿ ಬಂಧನ.

Udupilive News

ಧರ್ಮಸ್ಥಳ ಕ್ಷೇತ್ರದ ಗೌರವ ಹಾಗು ಘನತೆಯನ್ನು ಕುಗ್ಗಿಸಲೆತ್ನಿಸುತ್ತಿರುವುದು ಅಕ್ಷಮ್ಯ ಅಪರಾಧ – ವಿಶ್ವ ಹಿಂದೂ ಪರಿಷದ್

Udupilive News

ಅ.9ರಂದು ಉಡುಪಿಯ ಗೀತಾಂಜಲಿ ಸಿಲ್ಕ್ಸ್’ನಲ್ಲಿ ನವೀಕೃತ ಪುರುಷರ ವಿಭಾಗದ ಉದ್ಘಾಟನೆ ಸ್ವದೇಶಿ-ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳು ಲಭ್ಯ

Udupilive News

Leave a Comment