ಉಡುಪಿ

ನನ್ನಿಂದ ಸಾಧ್ಯವಾದಷ್ಟು ಕೆಲಸಗಳನ್ನು ಜನರಿಗೆ ಮಾಡಿಕೊಟ್ಟಿದ್ದೇನೆ.ಕೆ ವಿದ್ಯಾಕುಮಾರಿ.

ಉಡುಪಿ: ಉಡುಪಿ ಜಿಲ್ಲೆಯು ರಾಜ್ಯದಲ್ಲಿಯೇ ಉತ್ತಮವಾದ ಜಿಲ್ಲೆಯಾಗಿದ್ದು, ಇಲ್ಲಿರುವ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉತ್ತಮ ರೀತಿಯಿಂದ ಕೂಡಿದ್ದು, ಒಂದು ತಂಡವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಭಿಪ್ರಾಯ ವ್ಯಕ್ತಪಡಿಸಿದರು

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಜನರು ನಿರೀಕ್ಷೆಯನ್ನು ಇಟ್ಟುಕೊಂಡು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಬರುತ್ತಿದ್ದರು ಅವರಿಗೆ ನನ್ನಿಂದ ಸಾಧ್ಯವಾದಷ್ಟು ಕೆಲಸ ಕಾರ್ಯಗಳನ್ನು ಮಾಡಿ ಕೊಟ್ಟಿದ್ದೇನೆ. ಸರ್ಕಾರಿ ಕಚೇರಿಗಳು ಜನ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು, ಸರ್ಕಾರಿ ಕೆಲಸಗಳನ್ನು ನಿಷ್ಠೆಯಿಂದ ಮಾಡಿದರೆ ಜನರು ನಮ್ಮನ್ನು ಗೌರವಿಸುತ್ತಾರೆ ಎಂದರು.

ಮಳೆಗಾಲದ ಸಂದರ್ಭದಲ್ಲಿ ಪ್ರಕೃತಿಕವಾಗಿ ವಿಕೋಪವಾದಾಗ ಅಧಿಕಾರಿಗಳು ಉತ್ತಮವಾಗಿ ನಿಭಾಯಿ ಸಿದ್ದಾರೆ, ಕಳೆದ ಐದು ವರ್ಷಗಳ ನಂತರ ದ್ವಿತೀಯ ಪಿಯುಸಿ ಪರೀಕ್ಷೆಯ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಮೊದಲು ಬಂದಿದೆ ಹಾಗೂ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ತಂದು ಕೊಟ್ಟಿದೆ.ಇದಕ್ಕೆ ಶಿಕ್ಷಣ ಇಲಾಖೆ, ಶಾಲಾ -ಕಾಲೇಜುಗಳ ಮುಖ್ಯ ಶಿಕ್ಷಕರು, ಪ್ರಾಂಶುಪಾಲರ, ಅಧ್ಯಾಪಕರು, ಶಿಕ್ಷಕರ ಪರಿಶ್ರಮ ಕಾರಣ.ಆದೆ ರೀತಿಯಲ್ಲಿ ಅರೋಗ್ಯ ಇಲಾಖೆಯಲ್ಲಿಯೂ ಸಹ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿದೆ ಎಂದರು.

ಜಿಲ್ಲೆಯಲ್ಲಿ ಮರಳು ಹಾಗೂ ಗಣಿ ಸಮಸ್ಯೆಯನ್ನು ಬಗೆಹರಿಸಲು, ಮತದಾನದ ಸಂದರ್ಭದಲ್ಲಿ ಪರಿಸ್ಥಿಗಳನ್ನು ಸಮರ್ಥವಾಗಿ ನಿಭಾಯಿಸಲು ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಜೊತೆಯಾಗಿ ಸಹಕಾರ ನೀಡಿದ್ದಾರೆ ಜೊತೆಗೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗೆ ಅವಿರತ ಶ್ರಮ ವಹಿಸಿದ್ದಾರೆ ಎಂದರು.

ಜಿಲ್ಲಾಧಿಕಾರಿ ಸ್ವರೂಪ . ಟಿ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ
ಸರ್ಕಾರಿ ಉದ್ಯೋಗವನ್ನು ನಿರ್ವಹಿಸಲು ಎಲ್ಲರಿಗೂ ಅವಕಾಶಗಳು ದೊರೆಯುವುದಿಲ್ಲ ಅವಕಾಶ ದೊರೆತ ನಾವುಗಳು ಬದ್ಧತೆಯಿಂದ ಕೆಲಸ ಕಾರ್ಯಗಳನ್ನು ಮಾಡಬೇಕು ಸರ್ಕಾರ ಇರುವುದು ಜನಸಾಮಾನ್ಯ ರಿಗೋಸ್ಕರ ಅವರ ಕೆಲಸ ಕಾರ್ಯಗಳನ್ನು ಆದ್ಯತೆಯ ಮೇಲೆ ನಿಯಮಾನುಸಾರ ಮಾಡಬೇಕು ಅವಶ್ಯವಿದ್ದವರಿಗೆ ಮಾನವೀಯ ನೆಲಗಟ್ಟಿನಲ್ಲಿ ಸ್ಪಂದಿಸಬೇಕು ಎಂದವರು ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾಧಿಕಾರಿಗಳು ಒಂದು ತಂಡವಾಗಿ ಕಾರ್ಯನಿರ್ವಹಿಸೋಣ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ತಮ್ಮ ಕರ್ತವ್ಯವನ್ನು ನಿರ್ವಹಿಸುವ ರೀತಿ, ಕಾರ್ಯವಿಧಾನ ಇತರರನ್ನು ಆಶ್ಚರ್ಯ ಗೊಳಿಸುವಂತೆ ಇರುತ್ತಿತ್ತು. ತಮ್ಮ ಜೊತೆಯಲ್ಲಿ ಕರ್ತವ್ಯ ನಿರ್ವಹಿಸಿರುವುದು ನನಗೆ ಹೆಮ್ಮೆ ಇದೆ. ಇನ್ನಷ್ಟು ಸಾರ್ವಜನಿಕ ಸೇವೆ ಮಾಡಲು ಸ್ಫೂರ್ತಿದಾಯಕವಾಗಿದೆ ಎಂದರು.
ಅತ್ಯಂತ ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿ, ಮತದಾನದ ಸಂದರ್ಭ, ಸೇರಿದಂತೆ ಎಲ್ಲಾ ಕೆಲಸ ಕಾರ್ಯಗಳಲ್ಲಿಯೂ ಸಹಕಾರ ನೀಡಿದ್ದಾರೆ. ಈ ಒಂದು ವರ್ಷ ಹನ್ನೊಂದು ತಿಂಗಳು ಕಳೆದಿರುವುದೇ ಗೊತ್ತಾಗಲಿಲ್ಲ. ಕರ್ತವ್ಯ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು ಮಾರ್ಗಸೂಚಿಗಳನ್ನು ನೀಡಿದ್ದೀರಿ. ತಮ್ಮೊಂದಿಗೆ ಕರ್ತವ್ಯ ನಿಭಾಯಿಸಿದ ದಿನಗಳು ಅದ್ವಿತೀಯವಾಗಿದ್ದು, ಇಂತಹ ನೆನಪುಗಳು ಸದಾ ಸ್ಮರಣಿಯ ಎಂದರು.
.ಕಳೆದ ನಾಲ್ಕೈದು ವರ್ಷಗಳಿಂದ ಅವರನ್ನು ಗಮನಿಸಿದ್ದೇನೆ. ಅತ್ಯಂತ ಕ್ರಿಯಾಶೀಲರಾಗಿದ್ದ ಇವರು, ಇವರ ಕಾರ್ಯವೈಖರಿ ಪ್ರತಿಯೊಬ್ಬರಿಗೂ ಮಾದರಿ ಆಗುವ ರೀತಿಯಲ್ಲಿರುತಿತ್ತು ಎಂದರು

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಕರಾವಳಿ ಕಾವಲು ಪಡೆಯ ಅಧೀಕ್ಷಕ ಮಿಥುನ್,ಡಿ.ಎಫ್. ಓ ಗಣಪತಿ,ಎ.ಎಸ್.ಪಿ.
ಹರ್ಷಂಪ್ರಿಯವದ, ಸಹಾಯಕ ಕಮಿಷನರ್ ರಶ್ಮಿ,
ವಿವಿಧ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸ್ವಾಗತಿಸಿದರು. ಯುವಜನ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ ನಿರೂಪಿಸಿ ವಂದಿಸಿದರು.

Related posts

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

Udupilive News

ಕಂಬಳ ಪ್ರೇಮಿಗಳಿಗೆ ಸಿಹಿಸುದ್ದಿ .ಈ ಬಾರಿಯ ಕಂಬಳ ವೇಳಾಪಟ್ಟಿ ಬಿಡುಗಡೆ

Udupilive News

ಕೊಕ್ಕರ್ಣೆಯಲ್ಲಿ ಸತ್ಯನಾಥ ಸ್ಟೋರ್ಸ್’ನ ನೂತನ ಶಾಖೆ ಉದ್ಘಾಟನೆ

Udupilive News

Leave a Comment