ಉಡುಪಿರಾಜ್ಯ

ಚಕ್ರವರ್ತಿ ಸೂಲಿಬೆಲೆಯವರು ಸುಳ್ಳನ ಚಕ್ರವರ್ತಿ.ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

ಉಡುಪಿ: ಚಕ್ರವರ್ತಿ ಸೂಲಿಬೆಲೆಯೋರ್ವ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ ಭಗವದ್ಗೀತೆ ಮಹಾಭಾರತ ಹೇಳುತ್ತಾರೆ. ಆದರೆ ಬಾಯಿ ತೆರೆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು. ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ ಬೆಳ್ಳಗೆ ಇರೋದನ್ನ ಕಪ್ಪು ಮಾಡುವುದರಲ್ಲಿ ಅವರು ನಿಸ್ಸಿಮರು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಆರೋಪಿದರು.

https://www.instagram.com/reel/DLHWXkIzuQ9/?igsh=MWNhYnEwYTZzem9xMQ==https://www.instagram.com/reel/DLHWXkIzuQ9/?igsh=MWNhYnEwYTZzem9xMQ==

ಉಡುಪಿಯಲ್ಲಿ ಇಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಾಕ್ ಸ್ವಾತಂತ್ರ್ಯ ಸೇರಿದಂತೆ ಎಲ್ಲಾ ತರನಾದ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಕೊಟ್ಟಿದೆ. ಇಡೀ ದೇಶದ ಇತಿಹಾಸದಲ್ಲಿ ಸಂವಿಧಾನವನ್ನು ಎತ್ತಿ ಹಿಡಿದ ಪಕ್ಷ ಕಾಂಗ್ರೆಸ್. ನಾವು ಚಕ್ರವರ್ತಿ ಸೂಲಿಬೆಲೆಯಿಂದ ಪಾಠ ಕೇಳಬೇಕಾಗಿಲ್ಲ. ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಸೂಲಿಬೆಲೆ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಸೂಲಿಬೆಲೆ ತಮ್ಮ ಪ್ರವಾಸ ಮಾಡಬಹುದು. ಉಡುಪಿ ಶಾಂತಿ ಪ್ರಿಯರ ಜಿಲ್ಲೆ. ಹೀಗಾಗಿ ದ್ವೇಷದ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ ಎಂದರು. ಕರಾವಳಿಗೆ ಕೋಮ ನಿಗ್ರಹ ಪಡೆ ರಚನೆಗೆ ಬಿಜೆಪಿ ಶಾಸಕರ ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಒಂದು ಕಡೆ ಬಿಜೆಪಿ ಕೋಮುವಾದವನ್ನ ಪ್ರಚೋದನೆ ಮಾಡುತ್ತೆ. ಆದರೆ, ನಾವು ಕೋಮು ಪ್ರಚೋದನೆ ಮಾಡುತ್ತಿಲ್ಲ ಎನ್ನುತ್ತಾರೆ. ಇನ್ನೊಂದು ಕಡೆ ಕೋಮು ನಿಗ್ರಹದಳಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ. ಈ ಮನೋಭಾವನೆಯ ಬಿಜೆಪಿ ಶಾಸಕರನ್ನು ನೋಡಿದರೆ ಮನಸ್ಥಿತಿ ಏನು ಅನ್ನೋದು ಉಡುಪಿಯ ಜನತೆಗೆ ಅರ್ಥವಾಗುತ್ತೆ ಎಂದು ಕಿಡಿಕಾರಿದರು.

Related posts

ನನ್ನಿಂದ ಸಾಧ್ಯವಾದಷ್ಟು ಕೆಲಸಗಳನ್ನು ಜನರಿಗೆ ಮಾಡಿಕೊಟ್ಟಿದ್ದೇನೆ.ಕೆ ವಿದ್ಯಾಕುಮಾರಿ.

Udupilive News

ದೈವಜ್ಞ ಸೊಸೈಟಿ ಬ್ಯಾಂಕ್ ಚುನಾವಣೆಯಲ್ಲಿ ಸತ್ಯನಾರಾಯಣ ಶೇಟ್ ಗೆ ಭರ್ಜರಿ ಗೆಲುವು.ಪ್ರತಿಸ್ಪರ್ಧಿ ಭಾಸ್ಕರ್ ಶೇಟ್ ಗೆ ಹೀನಾಯ ಸೋಲು.

Udupilive News

ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷ ,ಮಣಿಪಾಲ ಆರೋಗ್ಯ ಕಾರ್ಡ್ 2025 ರ  ನೋಂದಣಿ ಪ್ರಾರಂಭ

Udupilive News

Leave a Comment