ದಕ್ಷಿಣ ಕನ್ನಡ

ಮಂಗಳೂರು| ಬಸ್ಸಿಗೆ ಕಲ್ಲು ತೂರಾಟ ಪ್ರಕರಣದ ಆರೋಪಿ ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ ಪತ್ತೆ!

ಮಂಗಳೂರು: ಬಸ್ ಮೇಲೆ ಕಲ್ಲು ತೂರಾಟ ಮಾಡಿದ್ದ ಪ್ರಕರಣದ ತನಿಖೆಗೆ ತೆರಳಿದ್ದ ಪೊಲೀಸರೆ ದಂಗಾಗಿದ್ದು, ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆಯಾಗಿದೆ ಎಂದು ಹೇಳಲಾಗಿದೆ.

ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಸುದ್ದಿಗೆ ಕಾರಣವಾಗಿದೆ.

ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಘಟನೆ ವಿವರ: ಈ ಹಿಂದೆ ಅಪಘಾತವೆಸಗಿದ ಖಾಸಗಿ ಬಸ್ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಪೊಲೀಸರು ಆರೋಪಿಯ ಮೊಬೈಲ್ ವಶಕ್ಕೆ ಪಡೆದಿದ್ದರು.
ಪೊಲೀಸರು ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ. ಈ ಪೈಕಿ ಆ ಭಾಗದ ಪ್ರಮುಖ ರಾಜಕಾರಣಿಯ ಅಶ್ಲೀಲ ವಿಡಿಯೋ ಕೂಡ ಪತ್ತೆಯಾಗಿದೆ ಎಂದು ಹೇಳಲಾಗಿದೆ.

Related posts

ಮಂಗಳೂರು| ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಯುವ ವೈದ್ಯ ಸ್ಥಳದಲ್ಲೇ ಸಾವು

Udupilive News

ಕೆಲಸವಿಲ್ಲದೇ ಕಂಗಲಾಗಬೇಡಿ ,ಕೈ ತುಂಬಾ ಸಂಬಳ ಕೊಡುವ ಕೆಲಸಗಳು ಇಲ್ಲಿದೆ.

Udupilive News

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಜಯ

Udupilive News

Leave a Comment