ಉಡುಪಿ

ಉಡುಪಿ: ಶೀರೂರು ಪರ್ಯಾಯ; ಕಟ್ಟಿಗೆ ಮುಹೂರ್ತ ಸಂಪನ್ನ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯ ಮಹೋತ್ಸವದಲ್ಲಿ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿಯಾಗಿ “ಕಟ್ಟಿಗೆ ಮುಹೂರ್ತವು” ಶ್ರೀಕೃಷ್ಣ ಮಠದ ಪರಿಸರದಲ್ಲಿ ಇಂದು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರೊಂದಿಗೆ ಪ್ರಸ್ತುತ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗು ಕಿರಿಯ ಯತಿ ಸುಶೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

ಶ್ರೀರೂರು ಮಠದ ದಿವಾನರಾದ ಡಾ.ಉದಯಕುಮಾರ ಸರಳತ್ತಾಯರು ನೇತೃತ್ವದಲ್ಲಿ ಪುರೋಹಿತರಾದ ಗಿರಿರಾಜ ಉಪಾಧ್ಯಾಯರು ಶ್ರೀರೂರು ಮಠದ ಶ್ರೀವಿಠ್ಠಲ ದೇವರು,ಶ್ರೀಚಂದ್ರೇಶ್ವರ ದೇವರು,ಶ್ರೀಅನಂತೇಶ್ವರ ದೇವರು,ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ನಂತರ ಮಠದ ಕಲ್ಸಂಕ ಲಕ್ಷ್ಮೀ ತೋಟದಿಂದ ಕಟ್ಟಿಗೆಯನ್ನು ಎತ್ತಿನಗಾಡಿ ಹಾಗೂ ಕೈಗಾಡಿಯಲ್ಲಿ ಮತ್ತು ಭಕ್ತರು ಕೈಯಲ್ಲಿ ಹಿಡಿದುಕೊಂಡು ಮೆರವಣಿಗೆಯಲ್ಲಿ ತರಲಾಯಿತು.

ನಂತರ ಮಧ್ವಸರೋವರ ಈಶಾನ್ಯ ಭಾಗದ ನಿಗದಿತ ಸ್ಥಳದಲ್ಲಿ ಪೂಜಾದಿಗಳನ್ನು ಸಲ್ಲಿಸಿ ಪ್ರಾರ್ಥನೆಗೈದು ಕಟ್ಟಿಗೆ ರಥ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಪರ್ಯಾಯ ಸ್ವಾಗತ ಸಮಿತಿ ಕಚೇರಿ ಉದ್ಘಾಟನೆಯನ್ನು ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ,ಮಾಜಿ ಶಾಸಕರಾದ ರಘುಪತಿ ಭಟ್, ಉಡುಪಿ ನಗರಸಭಾಧ್ಯಕ್ಷರಾದ ಪ್ರಭಾಕರ ಪೂಜಾರಿ,ಮಟ್ಟಾರು ರತ್ನಾಕರ ಹೆಗ್ಡೆ, ಮಠದ ಪಾರುಪತ್ಯಗಾರರಾದ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

ಪರ್ಯಾಯ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ರಾಜರ್ಷಿ ವೀರೇಂದ್ರ ಹೆಗ್ಗಡೆಯವರನ್ನು ನೇಮಿಸಲಾಯಿತು.ಅಧ್ಯಕ್ಷರಾಗಿ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ,ಕಾರ್ಯಾಧ್ಯಕ್ಷರಾಗಿ ಕಟೀಲು ದೇವಳದ ಅರ್ಚಕರಾದ ಗೋಪಾಕೃಷ್ಣ ಅಸ್ರಣ್ಣ,ಬೆಂಗಳೂರಿನ ಸಂಸದರಾದ ತೇಜಸ್ವಿ ಸೂರ್ಯ,ಮಣಿಪಾಲದ ಉದ್ಯಮಿ ರಂಜನ್ ಪೈ ಹಾಗೂ ಪ್ರಧಾನ ಕಾರ್ಯಾಧ್ಯಕ್ಷರಾಗಿ ಮಟ್ಟಾರು ರತ್ನಾಕರ ಹೆಗ್ಡೆ ಯವರನ್ನು ನೇಮಿಸಲಾಯಿತು.

Related posts

ರಾಡ್ ಹಿಡಿದು ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥ ಗುಣಮುಖ* :*ವಾರಸುದಾರರ ಪತ್ತೆಗೆ ಸೂಚನೆ

Udupilive News

ಚಕ್ರವರ್ತಿ ಸೂಲಿಬೆಲೆಯವರು ಸುಳ್ಳನ ಚಕ್ರವರ್ತಿ.ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

Udupilive News

ಯುವ ಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್ ಬಿ

Udupilive News

Leave a Comment