ಉಡುಪಿ

.ಎಂ.ಇ.ಜಿ.ಪಿ ಯೋಜನೆಯ ಕುರಿತು ಸುಳ್ಳು ಮಾಹಿತಿ ಬಗ್ಗೆ ಎಚ್ಚರ

ಉಡುಪಿ,: ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆ (ಪಿ.ಎಂ.ಇ.ಜಿ.ಪಿ) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಮುಖಾಂತರ ಅನುಷ್ಟಾನಗೊಳಿಸಲಾಗುತ್ತಿದೆ. ಆದರೆ ಸ್ವಂತ ಉದ್ಯೋಗ ನಡೆಸುವವರಿಗೆ ಕೇಂದ್ರ ಸರಕಾರದಿಂದ ಶೇ. 35 ಸಬ್ಸಿಡಿಯೊಂದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರಕಿಸಿಕೊಡುವುದಾಗಿ ಮೊಬೈಲ್ ಸಂಖ್ಯೆ: 7338492769 / 7411795969 ಅನ್ನು ಕರಪತ್ರದಲ್ಲಿ ಮುದ್ರಿಸಿ ಜಿಲ್ಲೆಯಲ್ಲಿ ಪ್ರಚಾರ ಪಡಿಸುತ್ತಿರುವುದು ಕಂಡು ಬಂದಿರುತ್ತದೆ.

ಪಿಎಂಇಜಿಪಿ ಯೋಜನೆಯ ಅನುಷ್ಟಾನದ ಬಗ್ಗೆ ಯಾವುದೇ ಖಾಸಗಿ ಏಜೆನ್ಸಿಗಳ ನೇಮಕವಾಗಿರುವುದಿಲ್ಲ. ಯೋಜನೆಯ ಸದುಪಯೋಗ ಪಡೆಯಲು ಸಾರ್ವಜನಿಕರು ನೇರವಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಮಣಿಪಾಲ, ಉಡುಪಿ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ, ಬೆಂಗಳೂರು ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಗೋವಾ ಮಾದರಿಯಲ್ಲಿ ಕರಾವಳಿ ಬೀಚ್‌ಗಳಲ್ಲಿ ಮದ್ಯ ಮಾರಾಟ ಕುರಿತು ಪ್ರವಾಸೋದ್ಯಮ ಇಲಾಖೆ ಚಿಂತನೆ

Udupilive News

ನೆರೆ ನೀರಲ್ಲಿ ಯುವಕರ ಹುಚ್ಚಾಟ.ಬೈಕ್ ಸಹಿತ ಕೊಚ್ಚಿ ಹೋದ ಯುವಕರು.

Udupilive News

ಉಡುಪಿ ನಗರ ಮದ್ಯೆ ಕತ್ತು ಸೀಳಿ ಸ್ನೆಹಿತನ ಕೊಲೆ.

Udupilive News

Leave a Comment