ಇಂದ್ತಾಳಿ ರೈಲ್ವೇ ನಿಲ್ದಾಣಕ್ಕೆ ಯಾತ್ರಿಕರ ಅನುಕೂಲಕ್ಕಾಗಿ ಸಿಟಿ ಬಸ್ ಸಂಚಾರದ ವೆವಸ್ಥೆ ಕಲ್ಪಿಸುವಂತೆ ಉಡುಪಿ ರೈಲ್ವೆ ಯಾತ್ರಿ ಸಂಘದ ವತಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಇವರಿಗೆ ಮನವಿ ಸಲ್ಲಿಸಲಾಯಿತು.
ರೈಲು ನಿಲ್ದಾಣದಲ್ಲಿ ಬಸ್ಸುಗಳು ಬಾರದ ಕಾರಣ ಪ್ರಯಾಣಿಕರು ಬಸ್ಸಿಗಾಗಿ ಇಂದ್ರಾಳಿ ರೈಲ್ವೆ ಬ್ರಿಡ್ಜ್ ವರೆಗೆ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ.ಇದರಿಂದಾಗಿ ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ .ಈ ಕಾರಣಗಳಿಂದಾಗಿ ಸಿಟಿ ಬಸ್ ಸಂಚಾರ ಅರಂಭಿಸಬೇಕೆಂದು ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಉಡುಪಿ ರೈಲ್ವೆ ಯಾತ್ರಿ ಸಂಘದ ವತಿಯಿಂದ ಅಧ್ಯಕ್ಷರಾದ ಧೀರಜ್ ಶಾಂತಿ. ಸಂಘದ ಉಪಾಧ್ಯಕ್ಷರಾದ ಮಧುಸೂದನ್ ಹೇರೂರು, ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ಕೋಶಾಧಿಕಾರಿ ಅಜಿತ್ ಕುಮಾರ್ ಪೈ, ನಿರ್ದೇಶಕರುಗಳಾದ ಜಾನ್ ರೆಬೆಲ್ಲೊ, ಶ್ರೀನಿವಾಸ್ ಶೆಟ್ಟಿ ತೊನ್ಸೆ, ಪ್ಲಾಸಿಡ್ ಹಾಜರಿದ್ದರು.