ಉಡುಪಿ: ಗೃಹಲಕ್ಷ್ಮಿ ಯೋಜನೆಯ ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ.
ಈಗ ಆ ಹಣವನ್ನ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಹಣ ಬಿಡುಗಡೆಯಾಗಿ ಸರಿಸುಮಾರು ಐದು ಆರು ದಿನಗಳು ಕಳೆದಿವೆ ಎಲ್ಲರಿಗೂ ಹಣ ತಲುಪಲಿದೆ. ಜೂನ್ ತಿಂಗಳಿನ ಬಾಕಿ ಹಣ ಸಂದಾಯವಾಗಿದೆ. ಜುಲೈ ಹಣ ಕೆಲವೇ ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಬರಲಿದೆ ಮುಂದಿನ ಗಣೇಶ ಚತುರ್ಥಿಯ ಒಳಗೆ ಗೃಹಲಕ್ಷ್ಮಿಯ ಜುಲೈ ತಿಂಗಳ ಹಣ ಬಿಡುಗಡೆ ಮಾಡಬೇಕೆನ್ನುವ ಆಸೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.