ಉಡುಪಿ

ಹುಟ್ಟು ಹಬ್ಬದಂತೆ ಯುವತಿಗೆ ಚಾಕುವಿನಿಂದ ಇರಿದು ಪರಾರಿ.ಕೊಕ್ಕರ್ಣೆಯಲ್ಲಿ ಘಟನೆ.

ಬ್ರಹ್ಮಾವರ: ಇಲ್ಲಿನ ಕೊಕ್ಕರ್ಣೆಯಲ್ಲಿ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಲ್ಲಿ ಚುಚ್ಚಿ ಹತ್ಯೆಗೆ ಯತ್ನಿಸಿ ಬೈಕ್ ಬಿಟ್ಟು ಪರಾರಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಗಂಭೀರ ಗಾಯಗೊಂಡ ಯುವತಿಯನ್ನು ಕೊಕ್ಕರ್ಣೆ ಪೂಜಾರಿಬೆಟ್ಟು ನಿವಾಸಿ ರಕ್ಷಿತಾ (20) ಎಂದು ಗುರುತಿಸಲಾಗಿದೆ. ಯುವತಿ ಮಣಿಪಾಲದಲ್ಲಿ ಕೆಲಸಕ್ಕೆ ಹೋಗಲೆಂದು ಮನೆಯಿಂದ 8.30ಕ್ಕೆ ಬರುವಾಗ ಕಾರ್ತಿಕ್ ಪೂಜಾರಿ ಎನ್ನುವಾತ ಏಕಾ ಏಕಿ ಬೈಕಿನಲ್ಲಿ ಬಂದು ನೇರವಾಗಿ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದಕ್ಕೆ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ.

ರಕ್ಷಿತಾಳದ್ದು ಇವತ್ತು ಹುಟ್ಟಿದ ದಿನವಾಗಿದ್ದು ಮದುವೆ ಆಗುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ನಿರಾಕರಿಸಿದ್ದಕ್ಕೆ ಯುವತಿಗೆ ಚಾಕು ಚುಚ್ಚಿ ಯುವಕ ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಕನ್ನಡ ಭಾಷೆ ಗೊತ್ತಿರುವ ಅಧಿಕಾರಿಗಳನ್ನು ನೇಮಿಸಿ: ಬ್ಯಾಂಕ್ಗಳಿಗೆ ಕೋಟ ಸಲಹೆ

Udupilive News

ನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

Udupilive News

ಮಾತಾ ಅಮೃತಾನಂದಮಯಿ ಸೇವಾ ಸಮಿತಿಯಿಂದ ಮಹಾ ಮೃತ್ಯುಂಜಯ ಹೋಮ ಆಯೋಜನೆ.

Udupilive News

Leave a Comment